ಬನ್ನೇರುಘಟ್ಟ (ಬೆಂ.ಗ್ರಾ):ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿ ನಡೆದಿದೆ.
ಬನ್ನೇರುಘಟ್ಟ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ, ಕೊಲೆ ಶಂಕೆ - Bannerghatta Forest
ಸಿಕೆ ಪಾಳ್ಯ ನಿವಾಸಿಯಾದ ವೆಂಕಟ್ಟಮ್ಮ (40) ಎಂಬ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಹುಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಕೆ ಪಾಳ್ಯ ನಿವಾಸಿಯಾದ ವೆಂಕಟ್ಟಮ್ಮ (40) ಎಂಬ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಹುಲ್ಲಹಳ್ಳಿ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕಳೆದ ನಾಲ್ಕೈದು ದಿನಗಳ ಹಿಂದೆ ನಡೆದಿರುವ ಘಟನೆ ಎಂದು ತಿಳಿದು ಬಂದಿದೆ.
ಇಂದು ಗ್ರಾಮದ ಜನರು ಹೊಲಗಳ ಕಡೆ ನಡೆದು ಹೋಗುವಾಗ ದುರ್ವಾಸನೆ ಬಂದ ಹಿನ್ನೆಲೆ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.