ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್)ನಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಸೇರಿದಂತೆ ಒಟ್ಟು 101 ಹುದ್ದೆಗಳ ನೇಮಕಾತಿ ನಡೆಯಲಿದೆ. ಇಂಜಿನಿಯರಿಂಗ್ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಬೆಂಗಳೂರಿನ ಬಿಇಎಂಎಲ್ನಲ್ಲಿ ಮ್ಯಾನೇಜ್ಮೆಂಟ್ ಟ್ರೈನಿ, ಅಸಿಸ್ಟೆಂಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಒಟ್ಟು 101 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧ ಪಟ್ಟ ಹುದ್ದೆ ಅನುಸಾರವಾಗಿ ಬಿಇ, ಬಿಟೆಕ್ ಪದವಿ ಹೊಂದಿರಬೇಕು.
ವೇತನ: ಮಾಸಿಕ 30,000 ರಿಂದ 3,00,000 ರೂ ವರೆಗೆ ವೇತನ ನಿಗದಿಸಲಾಗಿದೆ.
ವಯೋಮಿತಿ: ಅಭ್ಯರ್ಥಿಗಳು ಆಯಾ ಹುದ್ದೆಗೆ ಅನುಸಾರವಾಗಿ ವಯೋಮಿತಿ ನಿಗದಿ ಮಾಡಲಾಗಿದ್ದು, ಗರಿಷ್ಠ ವಯೋಮಿತಿ 45 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಈ ಹುದ್ದೆ ನಿರ್ದಿಷ್ಟ ವಯೋಮಿತಿಯ ಕುರಿತಾದ ಮಾಹಿತಿಯನ್ನು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪಡೆಯಬಹುದಾಗಿದೆ.