ಕರ್ನಾಟಕ

karnataka

ETV Bharat / state

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಯುವಕ ಸಾವು - Betrayal between two groups for trivial reason in Doddaballapura

ಹಳೇ ವೈಷಮ್ಯದ ಹಿನ್ನೆಲೆ ಎರಡು ಗುಂಪಿನ ನಡುವೆ ಘರ್ಷಣೆ ನಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.

Died person
ಕೊಲೆಯಾದ ವ್ಯಕ್ತಿ

By

Published : Jan 23, 2020, 12:26 PM IST

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ರಾಜಾನುಕುಂಟೆ ಹೊರ ವಲಯದ ಮೈಲಪನಹಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಂತೋಷ್(27) ಕೊಲೆಯಾದವ ಎಂದು ತಿಳಿದು ಬಂದಿದೆ. ಮತ್ತೋರ್ವ ಯುವಕ ಗಂಭೀರವಾಗಿ ಹಲ್ಲೆಗೆ ಒಳಗಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳೇ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಈ ವೇಳೆ ರಾಡ್​​ನಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.ಸದ್ಯ ಯುವಕನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details