ನೆಲಮಂಗಲ:ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಬೈಕ್ ಹೊತ್ತಿ ಉರಿದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಡ್ಲೂರ್ ಗೇಟ್ ಬಳಿ ನಡೆದಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿ ಬದಿಯಲ್ಲೇ ಬೈಕ್‌ಗೆ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಬೂದಿಯಾಗಿದೆ.