ನೆಲಮಂಗಲ:ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಕೆಬಿಡಿ ಟೋಲ್ ಬಳಿ ಭಾನುವಾರ ರಾತ್ರಿ ಅವಘಡ ನಡೆದಿದೆ.
ನೆಲಮಂಗಲ ಬಳಿ ಭೀಕರ ಅಪಘಾತ: ಬೈಕ್ ಸವಾರನ ಸ್ಥಿತಿ ಗಂಭೀರ - ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತ
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನಲ್ಲಿ ಸಂಭವಿಸಿದೆ.
ನೆಲಮಂಗಲ ಬಳಿ ಭೀಕರ ಅಪಘಾತ: ಬೈಕ್ ಸವಾರ ಗಂಭೀರ
ಘಟನೆಯಲ್ಲಿ ಗಾಯಗೊಂಡ ಬೈಕ್ ಸವಾರ ಸಿದ್ದಪ್ಪ (55) ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಕಾರಿನಲ್ಲಿ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಅವರಿಗೆ ಸೇರಿದ ಪಾಸ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.
ಘಟನೆ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.