ದೊಡ್ಡಬಳ್ಳಾಪುರ : ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದ ಹಿನ್ನೆಲೆ ಕಂದಾಯ ಸಚಿವ ಆರ್ ಅಶೋಕ್ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ರಾಜೀನಾಮೆ ಕೊಟ್ಟ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಆರ್ ಅಶೋಕ್ ವಿಶ್ವಾಸ - latest news of byelection
ಕಂದಾಯ ಸಚಿವ ಆರ್ ಅಶೋಕ್ ಉಪಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಚುನಾವಣೆ ಸಿದ್ಧತೆ ಬಗ್ಗೆ ಮಾತುಕತೆ ಮಾಡಲಾಗಿದೆ. ರಾಜೀನಾಮೆ ಕೊಟ್ಟ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು, ಬಿಜೆಪಿ ಬಾವುಟ ಹಾರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರದಲ್ಲಿ ನಡೆದ ರಾಷ್ಟ್ರೀಯ ಐಕ್ಯತ ಜನ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿದ ಆರ್ ಅಶೋಕ್ ಉಪಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಚುನಾವಣೆ ಸಿದ್ಧತೆ ಬಗ್ಗೆ ಮಾತುಕತೆ ಮಾಡಲಾಗಿದೆ. ರಾಜೀನಾಮೆ ಕೊಟ್ಟ ಶಾಸಕರ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದ್ದು , ಬಿಜೆಪಿ ಸರ್ಕಾರ ಬರಲು ಅವರ ಸಹಕಾರವಿದೆ. ರಾಜೀನಾಮೆ ಕೊಟ್ಟ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು, ಬಿಜೆಪಿ ಬಾವುಟ ಹಾರಬೇಕು. ಬಿಜೆಪಿ ಗೆಲುವಿಗಾಗಿ ಇವತ್ತಿನಿಂದಲೇ ತಯಾರಿ ನಡೆಸುತ್ತೇವೆಂದರು.
ಕೋರ್ಟ್ ವಿಚಾರಣೆಯ ನಂತರ ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ತೀರ್ಮಾನ ಮಾಡಲಾಗುತ್ತದೆ. ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆಂದರು.