ದೊಡ್ಡಬಳ್ಳಾಪುರ: ಮಠಾಧೀಶರು ಸಮಾಜಮುಖಿ ಕೆಲಸ ಮಾಡಬೇಕೇ ಹೊರತು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿ ಪಕ್ಷಗಳನ್ನು ಟೀಕಿಸಬಾರದು ಎಂದು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪ ಶಿವಶಂಕರ್ ಹರಿಹಾಯ್ದಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪಗೆ ಮಠಾಧೀಶರು ಬೆಂಬಲಿಸಿದ್ದಾರೆ. ಆದರೆ, ಸಿಎಂ ಬೆಂಬಲಿಸುವ ನಿಟ್ಟಿನಲ್ಲಿ ದಿಂಗಾಲೇಶ್ವರ ಶ್ರೀಗಳು ಪಕ್ಷವನ್ನು ಟೀಕಿಸುವುದು ಸರಿಯಲ್ಲ. ಯಡಿಯೂರಪ್ಪ ಅವರನ್ನು ಸಿಎಂ ಆಗಿ ಮುಂದುವರಿಸದಿದ್ದರೆ, ಬಿಜೆಪಿಗೆ ಉಳಿಗಾಲವಿಲ್ಲ. ಸರ್ವನಾಶವಾಗುತ್ತದೆ, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಟಾರ್ಚ್ ಹಾಕಿ ಹುಡುಕಬೇಕಾದ ಸ್ಥಿತಿ ಬರುತ್ತದೆ ಎಂದು ಹೇಳಿಕೆ ನೀಡುವುದು ತರವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.