ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ಗಾಗಿ ರಸ್ತೆ ವಿಸ್ತರಣೆಯ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದೇವನಹಳ್ಳಿ ಬಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಎರಡನೇ ಟರ್ಮಿನಲ್ಗಾಗಿ ರಸ್ತೆ ವಿಸ್ತರಣೆ ಮತ್ತು ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿ ಬಳಿಯುವ ಕೆಲಸ ನಡೆದಿತ್ತು. ರಸ್ತೆಗೆ ಬಳಿಯಬೇಕಾದ ಬಣ್ಣಗಳನ್ನು ಕೆಲ ರಾಸಾಯನಿಕಗಳನ್ನು ಬೆರೆಸಿ ಸಿಲಿಂಡರ್ ಮೂಲಕ ಕಾರ್ಮಿಕರು ಕಾಯಿಸುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಪೋಟಗೊಂಡಿದೆ.