ಕರ್ನಾಟಕ

karnataka

ETV Bharat / state

ಎಸ್​ಡಿಪಿಐ, ಪಿಎಫ್ಐ ಸಂಘಟನೆಗಳ ನಿಷೇಧ‌ಕ್ಕೆ ಭೋವಿ ಸಮಾಜದ ಒತ್ತಾಯ - PFI

ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸದ ಮೇಲೆ ದಾಳಿ ನಡೆಸಿದ ಘಟನೆ ವಿರೋಧಿಸಿ ಭೋವಿ ಸಮುದಾಯ ಪ್ರತಿಭಟನೆ ನಡೆಸಿತು. ಈ ವೇಳೆ, ಎಸ್​ಡಿಪಿಐ ಮತ್ತು ಪಿಎಫ್ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಲಾಯಿತು.

ಭೋವಿ ಸಮಾಜ ಒತ್ತಾಯ
ಭೋವಿ ಸಮಾಜ ಒತ್ತಾಯ

By

Published : Aug 19, 2020, 10:45 AM IST

ದೊಡ್ಡಬಳ್ಳಾಪುರ: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ನಡೆಸಿದ ಘಟನೆ ವಿರೋಧಿಸಿ ಭೋವಿ ಸಮುದಾಯ ಪ್ರತಿಭಟನೆ ನಡೆಸಿತು. ಶಾಸಕರಿಗೆ ಸೂಕ್ತ ರಕ್ಷಣೆ ನೀಡಬೇಕು. ಘಟನೆಗೆ ಕಾರಣರಾದ ಎಸ್​ಡಿಪಿಐ ಮತ್ತು ಪಿಎಫ್ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಭೋವಿ ಸಮಾಜ ಒತ್ತಾಯ

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಭೋವಿ ಜನಾಂಗದ ಸಂಘದಿಂದ ಪತ್ರಿಕಾಗೋಷ್ಠಿ ನಡೆಸಿ, ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ನಡೆಡಸಿರುವ ಘಟನೆಗೆ ಭೋವಿ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಬೆಂಬಲ ಸೂಚಿಸಿ, ಆತ್ಮಸ್ಥೈರ್ಯ ತುಂಬಿದರು.

ಸಂಘದ ಅಧ್ಯಕ್ಷ ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ, ಘಟನೆಯನ್ನು ಪಕ್ಷಾತೀತವಾಗಿ ಖಂಡನೆ ಮಾಡಬೇಕಿದೆ. ಕಾಂಗ್ರೆಸ್ ಪಕ್ಷದ ದೊಡ್ಡ ದೊಡ್ಡ ನಾಯಕರು ಶ್ರೀನಿವಾಸಮೂರ್ತಿಗೆ ಹೆಚ್ಚಿನ ಬೆಂಬಲ ನೀಡಿಲ್ಲ. ಘಟನೆಗೆ ತೀವ್ರ ವಿರೋಧವನ್ನೂ ಕೂಡ ವ್ಯಕ್ತಪಡಿಸಿಲ್ಲ. ಕನಿಷ್ಠ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿಲ್ಲ. ಸಂಪೂರ್ಣ ಘಟನಾವಳಿಯನ್ನು ನೋಡಿದರೆ ರಾಜಕೀಯವಾಗಿ ದಲಿತ ಸಮುದಾಯವನ್ನು ಮೂಲೆಗುಂಪು ಮಾಡುವಂತೆ ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಕೂಡಲೇ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಸೂಕ್ತ ಭದ್ರತೆ ನೀಡಬೇಕಿದೆ. ಸಂಪೂರ್ಣ ಘಟನೆಯ ಸತ್ಯ ಹೊರಬರಬೇಕಾದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಭೋವಿ ಸಮುದಾಯದ ಮುಖಂಡರು ಆಗ್ರಹಿಸಿದರು.

ಎಸ್​ಡಿಪಿಐ, ಪಿಎಫ್ಐ, ಕೆಎಫ್​ಡಿ ಸಂಘಟನೆಗಳನ್ನು ನಿಷೇಧ ಮಾಡಿ. ಘಟನೆ ಕಾರಣಕರ್ತರಾದ ಪ್ರಮುಖ ಆರೋಪಿಗಳನ್ನು ಕೂಡಲೇ ಗಡಿಪಾರು ಮಾಡಿ ಎಂದು ಆಗ್ರಹಿಸಿದರು.

ABOUT THE AUTHOR

...view details