ಕರ್ನಾಟಕ

karnataka

ETV Bharat / state

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಇಂದು ಬ್ರಹ್ಮರಥೋತ್ಸವ - ಸುಬ್ರಮಣ್ಯಸ್ವಾಮಿಯ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಸ್ವಾಮಿ ದೇಗುಲದಲ್ಲಿ ಇಂದು ಬ್ರಹ್ಮರಥೋತ್ಸವ ನಡೆಯಲಿದೆ.

ಬ್ರಹ್ಮರಥೋತ್ಸವ
ಬ್ರಹ್ಮರಥೋತ್ಸವ

By ETV Bharat Karnataka Team

Published : Jan 16, 2024, 10:14 AM IST

ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿಂದು ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾ.): ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಇಂದು ಬ್ರಹ್ಮರಥೋತ್ಸವ ನಡೆಯಲಿದೆ. ದೇವರ ದರ್ಶನ ಪಡೆಯಲು ಬೆಳಿಗ್ಗೆ 3 ಗಂಟೆಯಿಂದಲೇ ಭಕ್ತರು ಸರದಿ ಸಾಲಲ್ಲಿ ನಿಂತು ಕಾಯುತ್ತಿದ್ದ ದೃಶ್ಯ ಕಂಡುಬಂತು. ಘಾಟಿ ಸುಬ್ರಮಣ್ಯ ಪ್ರಸಿದ್ಧ ನಾಗರಾಧನೆಯ ಕ್ಷೇತ್ರವಾಗಿದೆ.

ಮಧ್ಯಾಹ್ನ 12.15ರಿಂದ 12.30ಕ್ಕೆ ಸಲ್ಲುವ ಶುಭ ಮೇಷ ಲಗ್ನದಲ್ಲಿ ಬ್ರಹ್ಮರಥೋತ್ಸವ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಶಾಸಕ ಧೀರಜ್ ಮುನಿರಾಜು ಸೇರಿದಂತೆ ಗಣ್ಯರು ಭಾಗವಹಿಸುವ ಕುರಿತು ಮಾಹಿತಿ ಲಭ್ಯವಾಗಿದೆ.

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂಧಾಭಿಷೇಕ, ಭಸ್ಮದಭಿಷೇಕ ನಡೆಯಿತು. ದೇವಸ್ಥಾನವನ್ನು ಆಕರ್ಷಕವಾಗಿ ಹೂವುಗಳಿಂದ ಅಲಂಕರಿಸಲಾಗಿದೆ.

ರಾತ್ರಿ 8.30ರವರೆಗೂ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ರಹ್ಮರಥೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೊಬೈಲ್‌ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅಪರಾಧ ಕೃತ್ಯಗಳನ್ನು ನಡೆಯಲು ಡ್ರೋನ್​ ಕ್ಯಾಮರಾ ಮತ್ತು ದೇವಾಲಯದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: ಹುಲಗನ ಮುರುಡಿಯ ವೆಂಕಟರಮಣಸ್ವಾಮಿ ರಥೋತ್ಸವ ಸಂಭ್ರಮ - ವಿಡಿಯೋ

ABOUT THE AUTHOR

...view details