ಆನೇಕಲ್:ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಸೂಳಗಿರಿ ಸಮೀಪ ನಡೆದಿದೆ.
ಘಟನೆಯಲ್ಲಿ ಬಸ್ನಲ್ಲಿದ್ದ 14 ಜನ ಸೇರಿದಂತೆ ಬಸ್ಗಾಗಿ ಕಾಯುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃಷ್ಣಗಿರಿಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಬಸ್ ಮಹಿಳೆಯಗೆ ಡಿಕ್ಕಿ ಹೊಡೆದು ನಂತರ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದೆ.