ನೆಲಮಂಗಲ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾದ ಪರಿಣಾಮ ವೃದ್ಧನೋರ್ವ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ವೃದ್ಧ ಸಾವು - Car Accident one death at Nelamangala
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ತಾಲೂಕು ತಿಪ್ಪಗೊಂಡನಹಳ್ಳಿಯಲ್ಲಿ ರಸ್ತೆ ದಾಟುತಿದ್ದ ವೃದ್ಧನಿಗೆ ಕಾರು ಡಿಕ್ಕಿಯಾದ ಘಟನೆ ನಡೆದಿದೆ. ತಕ್ಷಣ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ವೃದ್ಧ ಸಾವು
ಲಕ್ಕೇನಹಳ್ಳಿ ಗ್ರಾಮದ ರಂಗಪ್ಪ (70) ಮೃತ ವೃದ್ಧ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ತಾಲೂಕು ತಿಪ್ಪಗೊಂಡನಹಳ್ಳಿ ಬಳಿ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ವೃದ್ಧನನ್ನು ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್ ಪೊಲೀಸರು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Car Accident one death