ಕರ್ನಾಟಕ

karnataka

ETV Bharat / state

ಚಾಲಕನ ಅಜಾಗರೂಕತೆಯಿಂದ ಕಾರು ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ - ನಿಯಂತ್ರಣ ತಪ್ಪಿ ಅಪಘಾತ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Car Accident
ಚಾಲಕನ ಅಜಾಗರುಕತೆಯಿಂದ ಕಾರು ಅಪಘಾತ

By

Published : Nov 19, 2022, 12:40 PM IST

Updated : Nov 19, 2022, 2:27 PM IST

ಚಿಕ್ಕಬಳ್ಳಾಪುರ:ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೊಸಹಳ್ಳಿ‌ಯಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಪುರುಷೋತ್ತಮ (23) ಹಾಗೂ ಜಯಪ್ಪ (21) ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಉಳಿದ ನಾಲ್ವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ಅಜಾಗರುಕತೆಯಿಂದ ಕಾರು ಅಪಘಾತ

ಬೆಂಗಳೂರಿನಿಂದ ಆಂಧ್ರಪ್ರದೇಶಕ್ಕೆ ಹೋಗುವ ವೇಳೆ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಅಪಘಾತ ನಡೆದಿರುವುದಾಗಿ ತಿಳಿದು ಬಂದಿದೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಕಮರಿಗೆ ಬಿದ್ದ ಟಾಟಾ ಸುಮೋ: 12 ಜನರ ದುರ್ಮರಣ

Last Updated : Nov 19, 2022, 2:27 PM IST

ABOUT THE AUTHOR

...view details