ನೆಲಮಂಗಲ:ಇನೋವಾ ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಕಂಟೈನರ್ ಲಾರಿಗೆ ಗುದ್ದಿ ಮುಂಭಾಗ ಸಂಪೂರ್ಣ ಜಖಂಗೊಂಡಿರುವ ಘಟನೆ ತಾಲೂಕಿನ ಡಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
ಲಾರಿಗೆ ಗುದ್ದಿದ ಕಾರು: ಮುಂಭಾಗ ಸಂಪೂರ್ಣ ಜಖಂ - undefined
ಕಾರೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Nelamangala
ಲಾರಿಗೆ ಗುದ್ದಿದ ಕಾರು ಸಂಪೂರ್ಣ ಜಖಂ ಗೊಂಡಿರುವುದು
ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಲಾರಿಯ ಡಿಸೇಲ್ ಟ್ಯಾಂಕ್ಗೆ ಗುದಿದ್ದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಈ ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಟ್ರಾಫಿಕ್ ನಿಯಂತ್ರಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.