ನೆಲಮಂಗಲ: ಅತಿ ವೇಗದಲ್ಲಿದ್ದ ಕಾರೊಂದು ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಹೆದ್ದಾರಿಯಲ್ಲಿ ಡಿವೈಡರ್ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ - bengalore
ಅತಿ ವೇಗದಲ್ಲಿದ್ದ ಕಾರೊಂದು ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಹೆದ್ದಾರಿಯಲ್ಲಿ ಡಿವೈಡರ್ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಚಾಲಕ ಅತಿ ವೇಗದಲ್ಲಿ ಕಾರು ಚಾಲನೆ ಮಾಡುತ್ತಿದ್ದು, ರಸ್ತೆ ಇಳಿಜಾರಾಗಿದ್ದರಿಂದ ಹೆದ್ದಾರಿಯಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾರಿದೆ. ಅದರ ಪರಿಣಾಮ ಡಿವೈಡರ್ನ ಸಿಗ್ನಲ್ ಪುಡಿ ಪುಡಿಯಾಗಿದ್ದು, ಕಾರು ಸಹ ಜಖಂಗೊಂಡಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.