ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿಯಲ್ಲಿ ಶರತ್ ಬಚ್ಚೇಗೌಡ ಹಾಗೂ ಎಂಟಿಬಿ ನಾಗರಾಜ್ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ-ಎಂಟಿಬಿ ಬೆಂಬಲಿಗರ ನಡುವೆ ಹೊಡೆದಾಟ - ಶಾಸಕ ಶರತ್ ಬಚ್ಚೇಗೌಡ
ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಹಾಗೂ ಎಂಟಿಬಿ ನಾಗರಾಜ್ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಸಂಭ್ರಮಾಚರಣೆ ವೇಳೆ ಗಲಾಟೆ
ಶರತ್ ಬಚ್ಚೇಗೌಡ ಉಪ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಶುರುವಾದ ಗಲಾಟೆಯಲ್ಲಿ ಗ್ರಾಪಂ ಸದಸ್ಯ ಮಂಜುನಾಥ್ ಎಂಬುವವರ ತಲೆಗೆ ಗಾಯವಾಗಿದೆ. ಗಾಯಾಳು ಮಂಜುನಾಥ್ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂದಗುಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.