ಕರ್ನಾಟಕ

karnataka

ETV Bharat / state

ವಿದೇಶಿ ಹಾಲಿನ ಮೇಲಿನ ಆಮದು ಸುಂಕ ತೆರವಿಗೆ ಕೇಂದ್ರ ನಿರ್ಧಾರ.. ಕನ್ನಡಪರ ಸಂಘಟನೆಗಳಿಂದ ವಿರೋಧ - ಕನ್ನಡಪರ ಸಂಘಟನೆಗಳಿಂದ ವಿರೋಧ

ವಿದೇಶಗಳಿಂದ ಅಮದಾಗುತ್ತಿರುವ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲಿನ ಆಮದು ಸುಂಕ ತೆರವಿಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಕನ್ನಡಪರ ಸಂಘಟನೆಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳಿಂದ ವಿರೋಧ

By

Published : Oct 14, 2019, 10:58 PM IST

ದೊಡ್ಡಬಳ್ಳಾಪುರ:ಕೇಂದ್ರ ಸರ್ಕಾರ ವಿದೇಶಗಳಿಂದ ಅಮದಾಗುತ್ತಿರುವ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಹಾಕುತ್ತಿರುವ ಸುಂಕ ತೆಗೆಯುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಿದೆ. ಇದು ರೈತರನ್ನ ಕೆರಳಿಸಿದ್ದು ಕೇಂದ್ರ ಸರ್ಕಾರದ ಕ್ರಮದಿಂದ ಹೈನುಗಾರಿಕೆ ನಂಬಿ ಜೀವನ ಮಾಡುತ್ತಿರುವ ಕುಟುಂಬಗಳು ಬೀದಿಗೆ ಬರುವ ಸ್ಥಿತಿಯಲ್ಲಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ರೊಚ್ಚಿಗೆದ್ದಿರುವ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕೃಷಿ ನಂಬಿ ಜೀವನ ನಡೆಸೋದು ಕಷ್ಟವಾಗಿದ್ದು, ಈ ಸಮಯದಲ್ಲಿ ರೈತರ ಕೈಹಿಡಿದಿರುವುದು ಹೈನುಗಾರಿಕೆ. ಕುಟುಂಬದಲ್ಲಿನ ಮಹಿಳೆಯರು ಹೈನುಗಾರಿಕೆಯಲ್ಲಿ ಹೆಚ್ಚು ತೊಡಗಿಕೊಂಡಿದ್ದು, ಸ್ವಾವಲಂಬನೆ ಜೀವನ ನಡೆಸುತಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಕ್ರಮ ಹೈನುಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳನ್ನ ಬೀದಿಗೆ ತರುವ ಸ್ಥಿತಿ ನಿರ್ಮಾಣ ಮಾಡುತ್ತಿದೆ.

ವಿದೇಶಗಳಿಂದ ಹಾಲು ಮತ್ತು ಹಾಲಿನ ಉತ್ಪನ್ನ ಅಮದಾಗುತ್ತಿದೆ. ಇದಕ್ಕೆ ಅಮದು ಸುಂಕ ಹಾಕುವ ಮೂಲಕ ದೇಶಿ ರೈತರನ್ನು ರಕ್ಷಣೆ ಮಾಡುವ ಕೆಲಸವನ್ನ ಹಿಂದಿನ ಕೇಂದ್ರ ಸರ್ಕಾರಗಳು ಮಾಡುತ್ತಿದ್ದವು. ಆದರೆ, ಮೋದಿ ಸರ್ಕಾರ ವಿದೇಶಗಳಿಂದ ಅಮದಾಗುವ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲಿನ ಆಮದು ಸುಂಕ ತೆಗೆಯುವ ನಿರ್ಧಾರ ಮಾಡಿದ್ದಾರೆ. ಒಂದು ವೇಳೆ ಇದು ಜಾರಿಯಾಗಿದ್ದೇ ಆದರೆ, ದೇಶಿ ರೈತರ ಹಾಲನ್ನು ಕೇಳುವರೇ ಇಲ್ಲದಂತ್ತಾಗುತ್ತದೆ ಎಂದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣ.

ಕೇಂದ್ರ ಸರ್ಕಾರ ಕ್ರಮದ ವಿರುದ್ಧ ರೊಚ್ಚಿಗೆದ್ದಿರುವ ಕನ್ನಡಪರ ಸಂಘಟನೆಯಿಂದ ದೊಡ್ಡಬಳ್ಳಾಪುರ ಬಮೂಲ್ ಘಟಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಹಸು ಮತ್ತು ಎಮ್ಮೆಗಳನ್ನು ನಿಲ್ಲಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ 22 ಸಾವಿರ ಹಳ್ಳಿಗಳಿದ್ದು 23 ಲಕ್ಷ ಹಾಲು ಉತ್ಪಾದಕರಿದ್ದಾರೆ. ಪ್ರತಿನಿತ್ಯ 84 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ವರ್ಷಕ್ಕೆ ಕೆಎಂಎಫ್ ಸಂಸ್ಧೆ 18 ಸಾವಿರ ಕೋಟಿ ವಹಿವಾಟು ನಡೆಸುತ್ತಿದೆ. ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕ್ರಮದಿಂದ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ. ಒಂದು ಲಕ್ಷ ಕೋಟಿ ಜನ ನಿರುದ್ಯೋಗಿಗಳಾಗಲಿದ್ದಾರೆ. ಕೇಂದ್ರ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಬಾರದಿದ್ದಾರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details