ದೇವನಹಳ್ಳಿ: ನೂತನ ಸಚಿವ ಸಂಪುಟದ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಹೈಕಮಾಂಡ್ ಅನುಮೋದಿಸಿದ ನೂತನ ಸಚಿವರ ಪಟ್ಟಿಯೊಂದಿಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಕೆಂಪೇಗೌಡ ವಿಮಾನ ನಿಲ್ದಾಣ
ಏರ್ ಇಂಡಿಯಾ ವಿಮಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದ್ದರು.
ಕಳೆದ ಎರಡು ದಿನದಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೂತನ ಸಚಿವ ಸಂಪುಟ ರಚನೆಯ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದರು. ಇಂದು ಹೈಕಮಾಂಡ್ ಅನುಮೋದಿಸಿದ ಸಚಿವರ ಪಟ್ಟಿಯೊಂದಿಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.