ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):ರಾಜ್ಯದಲ್ಲಿ ಮಂಗಳವಾರ ಬೆಳಗ್ಗೆ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಪೊಲೀಸರು ಮುಂಜಾಗ್ರತವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.
ದೇವನಹಳ್ಳಿ ತಾಲೂಕಿನ ಹರಳೂರಿನ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ನಲ್ಲಿ ನಿರ್ಮಾಣವಾಗಲಿರುವ, ಎಕ್ಸೈಡ್ ಕಂಪನಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದರು. ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಪೊಲೀಸರು PFI ಮತ್ತು SDPI ಮುಖಂಡರ ಮನೆ ಮೇಲೆ ದಾಳಿ ನಡೆಸಿಲ್ಲ. ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದಾರೆ. ಅದು ಕೂಡ ತಹಶೀಲ್ದಾರ್ ಮೂಲಕ ತೆಗೆದುಕೊಳ್ಳಲಾಗಿದೆ. ಹತ್ತು ಹಲವಾರು ಮಾಹಿತಿಗಳು ಪೊಲೀಸರಿಗೆ ಬಂದಿದೆ. ಹೀಗಾಗಿ ನಮ್ಮ ಕರ್ನಾಟಕ ಪೊಲೀಸರು ಕ್ರಮಕೈಗೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ದೇಶದೆಲ್ಲೆಡೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಎಷ್ಟು ಜನರನ್ನ ವಶಕ್ಕೆ ಪಡೆಯಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು, ನಾನು ಇನ್ನೂ ಪಡೆದುಕೊಂಡಿಲ್ಲ ಎಂದರು.
ಇದನ್ನೂ ಓದಿ:ವಿಜ್ಞಾನ ಅಧ್ಯಾತ್ಮಿಕತೆ ಒಂದೇ ನಾಣ್ಯದ ಎರಡು ಮುಖ.. ಅಧ್ಯಾತ್ಮಿಕತೆ ವಿಜ್ಞಾನಕ್ಕೆ ಸ್ಪೂರ್ತಿ ಎಂದ ಸಿಎಂ