ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನಕ್ಕೆ ಜಗನ್ನಾಥ ಭವನದಲ್ಲಿ ಶ್ರದ್ಧಾಂಜಲಿ - corona
ಬಳ್ಳಾರಿ ವಿಭಾಗ ಪ್ರಭಾರಿಗಳು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಹಾಗೂ ಅನೇಕ ದಶಕಗಳಿಂದ ಸಂಘಟನೆಗಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡು ರಾಜ್ಯಾದ್ಯಂತ ಎಲ್ಲಾ ಕಾರ್ಯಕರ್ತರಿಗೆ ಪ್ರೇರಣೆ ನೀಡುತ್ತಿದ್ದ ದಿ.ಅಶೋಕ್ ಗಸ್ತಿ ಅವರ ಅಕಾಲಿಕ ನಿಧನ ತುಂಬಲಾರದ ನೋವನ್ನುಂಟು ಮಾಡಿದೆ..
ಅಶೋಕ್ ಗಸ್ತಿ ನಿಧನಕ್ಕೆ ಶ್ರದ್ಧಾಂಜಲಿ
ಬೆಂಗಳೂರು :ಅಕಾಲಿಕವಾಗಿ ನಿಧನ ಹೊಂದಿದ ರಾಜ್ಯಸಭಾ ಸದಸ್ಯ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ, ದಿ. ಅಶೋಕ್ ಗಸ್ತಿ ಅವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು.