ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಹೇಮಂತ್ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಎಸ್ವೈ, ಎಂಟಿಬಿ ವಿರುದ್ಧ ಕಾಂಗ್ರೆಸ್ ದೂರು - ಸಿಎಂ ಬಿಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು
ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಹೇಮಂತ್ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ದೂರು ಕೊಟ್ಟಿದ್ದಾರೆ.
![ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಎಸ್ವೈ, ಎಂಟಿಬಿ ವಿರುದ್ಧ ಕಾಂಗ್ರೆಸ್ ದೂರು](https://etvbharatimages.akamaized.net/etvbharat/prod-images/768-512-5131034-thumbnail-3x2-sana.jpg)
ಬಿಎಸ್ವೈ, ಎಂಟಿಬಿ ವಿರುದ್ಧ ಕಾಂಗ್ರೆಸ್ ದೂರು
ನ. 18ರಂದು ಎಂಟಿಬಿ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿ ಕಚೇರಿಯಿಂದ 60 ಮೀಟರ್ ದೂರದಲ್ಲೇ ಅನುಮತಿ ಪಡೆಯದೇ ಚುನಾವಣಾ ಪ್ರಚಾರ ನಡೆಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಬಿಎಸ್ವೈ ಅವರು ಎಂಟಿಬಿ ಗೆಲ್ಲಿಸಿದರೆ 24 ಗಂಟೆಯಲ್ಲಿ ಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಿಎಸ್ವೈ, ಎಂಟಿಬಿ ವಿರುದ್ಧ ದೂರು
ಹೊಸಕೋಟೆಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದು ಬಹಿರಂಗವಾಗಿ ಬಿಎಸ್ವೈ ಅವರು ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿರುವ ಎಂಟಿಬಿ ಹಾಗೂ ಸಿಎಂ ವಿರುದ್ಧ ತುರ್ತಾಗಿ ದೂರು ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ.