ಕರ್ನಾಟಕ

karnataka

ETV Bharat / state

ಕಾಂಗ್ರೆಸ್ 15 ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೆ: ಎಂಟಿಬಿ ನಾಗರಾಜ್ - undefined

ಈಗಾಗಲೇ ಕೆಲವು ಪತ್ರಿಕೆಗಳು, ‌ಮಾಧ್ಯಮಗಳು ಹಾಗೂ ಬೇರೆ ಬೇರೆ ಸಂಸ್ಥೆಗಳು ನಡೆಸಿದ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಹದಿನೈದು ಕ್ಷೇತ್ರ ಗೆಲ್ಲುತ್ತೆವೆ ಎಂದ ವಸತಿ ಸಚಿವ ಎಂಟಿಬಿ ನಾಗರಾಜ್.

ಎಂಟಿಬಿ ನಾಗರಾಜ್

By

Published : Apr 25, 2019, 9:01 AM IST

ಹೊಸಕೋಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 15 ಕ್ಷೇತ್ರ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಎಂಟಿಬಿ ನಾಗರಾಜ್

ಹೊಸಕೋಟೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ವಸತಿ ಸಚಿವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಪಾಲುದಾರಿಕೆಯಲ್ಲಿ 28 ಕ್ಷೇತ್ರದಲ್ಲಿ ನಾವು ಜೆಡಿಎಸ್ ಪಕ್ಷಕ್ಕೆ 8 ಕ್ಷೇತ್ರ ಬಿಟ್ಟು ಕೊಟ್ಟಿದ್ದೇವೆ. ಅದರಲ್ಲಿ ಕಾಂಗ್ರೆಸ್ ಪಕ್ಷ 15 ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೆ ಅದರಲ್ಲಿ ನೋ ಡೌಟ್​ ಎಂ​ದರು. ಎಲ್ಲ ಕ್ಷೇತ್ರಗಳನ್ನೂ ನಾವೇ ಗೆಲ್ಲುತ್ತೇವೆ ಎನ್ನುವುದು ತಪ್ಪು. ಆದರಿಂದ ಜೆಡಿಎಸ್ ಎಂಟರಲ್ಲಿ ಮೂರು ಸ್ಥಾನ ಗೆಲ್ಲಬಹುದು. ಕಾಂಗ್ರೆಸ್ 15 ಸ್ಥಾನ ಗೆಲ್ಲುವುದು, ಉಳಿದ 8-9 ಬಿಜೆಪಿಯವರು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಕೆಲವು ಪತ್ರಿಕೆಗಳು, ‌ಮಾಧ್ಯಮಗಳು ಹಾಗೂ ಬೇರೆ ಬೇರೆ ಸಂಸ್ಥೆಗಳು ನಡೆಸಿದ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಹದಿನೈದು ಕ್ಷೇತ್ರ ಗೆಲ್ಲುತ್ತೇವೆ ಎಂದರು.

For All Latest Updates

TAGGED:

ABOUT THE AUTHOR

...view details