ದೊಡ್ಡಬಳ್ಳಾಪುರ:ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದ ಬಂದ ವಲಸೆ ಕಾರ್ಮಿಕರಿಂದ ಹೆಚ್ಚು ಕರೊನಾ ಪ್ರಕರಣ ಕಂಡು ಬರುತ್ತಿದ್ದು, ಎಲ್ಲರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತಿದೆಯೆಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ವಲಸೆ ಕಾರ್ಮಿಕರಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ: ಎಸ್.ಟಿ ಸೋಮಶೇಖರ್
ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದ ಬಂದ ವಲಸೆ ಕಾರ್ಮಿಕರಿಂದ ಹೆಚ್ಚು ಕರೊನಾ ಪ್ರಕರಣ ಬರುತ್ತಿದ್ದು, ಎಲ್ಲರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತಿದೆಯೆಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ನಗರದ ಬಾಬು ಜಗಜೀವನ್ ರಾವ್ ಭವನದಲ್ಲಿ ಬಮೂಲ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಮಾತನಾಡಿ, ಆಶಾ ಕಾರ್ಯಕರ್ತೆಯರು 1 ಲಕ್ಷದಿಂದ 5 ಲಕ್ಷದವರೆಗೆ ಸಾಲ ಪಡೆಯಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಸೊಸೈಟಿ ರಚನೆಗೆ ಚಿಂತನೆ ನಡೆಸಲಾಗಿದೆ. 40 ಸಾವಿರ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ 3ಸಾವಿರ ಧನ ಸಹಾಯ ಕಲ್ಪಿಸಲಾಗುತ್ತಿದೆ. ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದ ಬರುವ ವಲಸೆ ಕಾರ್ಮಿಕರಿಂದ ಹೆಚ್ಚು ಕರೊನಾ ಪ್ರಕರಣ ಬರುತ್ತಿದ್ದು, ಎಲ್ಲರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತಿದೆಯೆಂದರು. ಇನ್ನೂ ಲಾಕ್ಡೌನ್ಗೆ ಸಾರ್ವಜನಿಕರು ಉತ್ತಮ ಸಹಕಾರ ನೀಡಿರುವ ಕಾರಣ ಕೆಲವೊಂದು ವಿನಾಯಿತಿ ನೀಡಲಾಗಿದೆ ಎಂದರು.