ಕರ್ನಾಟಕ

karnataka

ETV Bharat / state

ಕೊರೊನಾ ಎಫೆಕ್ಟ್: ಘಾಟಿ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆಯಲ್ಲಿ ಇಳಿಮುಖ - ಘಾಟಿ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಇಳಿಮುಖ

ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

Declining number of Devotee in   Ghati tempal
ಘಾಟಿ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಭಾರಿ ಇಳಿಕೆ

By

Published : Mar 15, 2020, 10:17 AM IST

ದೊಡ್ಡಬಳ್ಳಾಪುರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ತಾಲೂಕಿನ ಸುಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಘಾಟಿ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಭಾರಿ ಇಳಿಕೆ: ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಮಾಹಿತಿ

ವಿಕೆಂಡ್​ನಲ್ಲಿ ಘಾಟಿ ಕ್ಷೇತ್ರಕ್ಕೆ ಬೆಂಗಳೂರು ಸೇರಿದಂದೆ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಆದರೆ ಇಂದು ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ತೀರಾ ಕಡಿಮೆ ಇದೆ. ಇದಕ್ಕೆಲ್ಲ ಕೊರೊನಾ ವೈರಸ್ ಹರಡುವ ಭೀತಿಯೇ ಕಾರಣ ಎನ್ನಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ನಾವು ಕ್ಷೇತ್ರದಲ್ಲಿ ಭಕ್ತರ ಅರೋಗ್ಯದ ರಕ್ಷಣೆಗಾಗಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ. ನಮ್ಮ ಸಿಬ್ಬಂದಿಗೆ ಆರೋಗ್ಯ ಇಲಾಖೆ ಸಹಕಾರದೊಂದಿಗೆ ಕೊರೊನಾ ವೈರಸ್ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ ಎಂದರು.


For All Latest Updates

TAGGED:

ABOUT THE AUTHOR

...view details