ನೆಲಮಂಗಲ: ನಗರದ ಹರ್ಷ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ ಹಿನ್ನೆಲೆ ಕಾಲೇಜನ್ನು ಸ್ಯಾನಿಟೈಸ್ ಮಾಡಲಾಗಿದೆ.
ನೆಲಮಂಗಲದಲ್ಲಿ 10 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ! - corona virus
ನೆಲಮಂಗಲದ ಹರ್ಷ ನರ್ಸಿಂಗ್ ಕಾಲೇಜಿನ 10 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ.
![ನೆಲಮಂಗಲದಲ್ಲಿ 10 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ! corona virus to Nursing students](https://etvbharatimages.akamaized.net/etvbharat/prod-images/768-512-10093279-thumbnail-3x2-vish.jpg)
ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ
ಸೋಂಕು ಕಾಣಿಸಿಕೊಂಡ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರ ಗಂಟಲು ದ್ರವ ಟೆಸ್ಟ್ ಮಾಡಿದಾಗ 10 ಮಂದಿದೆ ಕೊರೊನಾ ಪಾಸಿಟಿವ್ ಬಂದಿದೆ.
ಈಗಾಗಲೇ ಮೂವರು ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡ ಕಾರಣ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನುಳಿದ 7 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.