ದೊಡ್ಡಬಳ್ಳಾಪುರ :ಚೀನಾದಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ವಿಶ್ವದಾದ್ಯಂತ ಹರಡುತ್ತಿದ್ದು, 3 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಇನ್ನು ರಾಜ್ಯದಲ್ಲೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು ಜಿಲ್ಲೆಯ ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.
ಕೊರೊನಾ ವೈರಸ್ ಭೀತಿ: ದೊಡ್ಡಬಳ್ಳಾಪುರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸ್ವಚ್ಛತೆ - 100 ಕ್ಕೂ ಹೆಚ್ಚು ಬಸ್ ಗಳು ರಾಜಧಾನಿ ಬೆಂಗಳೂರು ರೂಟ್ನಲ್ಲಿ ಸಂಚಾರ
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ದೊಡ್ಡಬಳ್ಳಾಪುರ ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸ್ವಚ್ಛತೆ
ಜಿಲ್ಲೆಯ ಕೆಎಸ್ಆರ್ಟಿಸಿ ಡಿಪೋದಲ್ಲಿ 150ಕ್ಕೂ ಅಧಿಕ ಬಸ್ಗಳಿದ್ದು, 100ಕ್ಕೂ ಹೆಚ್ಚು ಬಸ್ ಗಳು ರಾಜಧಾನಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸುತ್ತವೆ. ಜಿಲ್ಲೆಯ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಆನಂದ್ ಎಲ್ಲಾ ಬಸ್ಗಳನ್ನ ಸ್ವಚ್ಛ ಮಾಡುವುದಕ್ಕೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಡೆಟಾಲ್ ಮಿಶ್ರಿತ ನೀರಿನಿಂದ ಬಸ್ಸಿನ ಪ್ರತಿಯೊಂದು ಸೀಟ್ಗಳ ಸ್ವಚ್ಛ ಮಾಡಲಾಗುತ್ತಿದ್ದು, ಸಿಂಪರಣೆ ಯಂತ್ರದ ಮೂಲಕ ಡೆಟಲ್ ಮಿಶ್ರಿತ ನೀರನ್ನು ಬಸ್ಸಿನ ಮೇಲ್ಛಾವಣಿಗೂ ಸಿಂಪರಿಸಲಾಗುತ್ತಿದೆ. ಅಧಿಕಾರಿಗಳ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.