ಕರ್ನಾಟಕ

karnataka

ETV Bharat / state

ಕೊರೊನಾ ಹೇಗೆ ಹರಡುತ್ತೆ, ರೋಗದ ಲಕ್ಷಣಗಳೇನು, ಮುಂಜಾಗ್ರತಾ ಕ್ರಮಗಳೇನು? ಇದು ನಿಮಗೆ ಗೊತ್ತಿರಲಿ.. - ಕೊರೊನಾ ರೋಗಲಕ್ಷಣ

ಜಗತ್ತಿನಾದ್ಯಂತ ಮಾರಣಾಂತಿಕ ಕೊರೊನಾ ವೈರಸ್ ಹರಡುತ್ತಿದೆ. ಈ ಡೆಡ್ಲಿ ಸೋಂಕಿಗೆ ಇಲ್ಲಿಯವರೆಗೆ ಯಾವುದೇ ಔಷಧಿ ಅಥವಾ ಚುಚ್ಚುಮದ್ದು ಕಂಡು ಹಿಡಿದಿಲ್ಲ. ಹೀಗಾಗಿ ಸಾರ್ವಜನಿಕರು ಸಾಕಷ್ಟು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉಪಯುಕ್ತ ಮಾಹಿತಿ ನಿಮಗೆ ತಿಳಿದಿರಲಿ..

coronavirus symptoms and precautions,ರಾಜ್ಯಕ್ಕೆ ಕಾಲಿಟ್ಟಿದೆ ಕರೊನಾ
ರಾಜ್ಯಕ್ಕೆ ಕಾಲಿಟ್ಟಿದೆ ಕರೊನಾ

By

Published : Mar 4, 2020, 5:31 PM IST

ಬೆಂಗಳೂರು:ಚೀನಾದ ವುಹಾನ್​ನಲ್ಲಿ ಕಾಣಿಸಿಕೊಂಡು ಪ್ರಪಂಚದಾದ್ಯಂತ ವ್ಯಾಪಿಸುತ್ತಿರುವ ಮಹಾಮಾರಿ ಕೊರೊನಾ ಸೋಂಕು ಭಾರತಕ್ಕೂ ಕಾಲಿರಿಸಿದ್ದು, ಒಟ್ಟು 28 ಶಂಕಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 16 ವಿದೇಶಿ ಹಾಗೂ 12 ಭಾರತೀಯರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

ಈ ಸೋಂಕು ಹೇಗೆ ಹರಡುತ್ತದೆ ಅದರ ಲಕ್ಷಣ ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನೋಡೋದಾದ್ರೆ,

ಇವು ಸೋಂಕಿನ ಲಕ್ಷಣಗಳು:

ಕೆಮ್ಮು, ಜ್ವರ, ಸೀನುವುದು ಉಸಿರಾಟ ಸಮಸ್ಯೆ, ಕೆಲ ರೋಗಿಗಳಲ್ಲಿ ವಾಂತಿ ಮತ್ತು ಭೇದಿ, ರೋಗಿಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದಿದ್ದಾಗ ನ್ಯುಮೋನಿಯಾ ಹಾಗೂ ಕಿಡ್ನಿ ವೈಫಲ್ಯ ಉಂಟಾಗಿ ಸಾವು ಸಂಭವಿಸುತ್ತದೆ.

ಕೊರೊನಾ ವೈರಸ್ ಹರಡುವ ಬಗೆ ಹೇಗೆ?

  • ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ,
  • ಸೋಂಕಿತ ವ್ಯಕ್ತಿಯ ಜೊತೆ ನಿಕಟ ಸಂಪರ್ಕದಲ್ಲಿದ್ದಾಗ ವೈರಾಣು ಹರಡುವ ಸಾಧ್ಯತೆ ಹೆಚ್ಚು.
  • ಸೋಂಕಿತ ವ್ಯಕ್ತಿಯೊಂದಿಗೆ ಹಸ್ತಲಾಘವ ಮತ್ತು ಸ್ಪರ್ಶಿಸುವಾಗ,
  • ಸೋಂಕಿತ ವ್ಯಕ್ತಿಯು ಬಳಸಿದ (ಕರವಸ್ತ್ರ,ಟವೆಲ್) ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ,
  • ಸ್ವಚ್ಛಗೊಳಿಸದ ಕೈಗಳಿಂದ ಕಣ್ಣು, ಮೂಗು ಹಾಗು ಬಾಯಿಯನ್ನು ಮುಟ್ಟುವುದರಿಂದ ಈ ಸೋಂಕು ಹರಡುತ್ತದೆ.

ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳೇನು?

  • ಕೊರೊನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದ ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು.
  • ಶಂಕಿತ ರೋಗಿಯು ಮನೆಯಲ್ಲಿದ್ದರೆ ಅವರಿಂದ ಪ್ರತ್ಯೇಕವಾಗಿ ವಾಸಿಸಬೇಕು.
  • ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಆಗಿಂದಾಗ್ಗೆ ಸಾಬೂನಿನಿಂದ ಕೈ ತೊಳೆಯಬೇಕು.
  • ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್/ ಕರವಸ್ತ್ರ ಉಪಯೋಗಿಸಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.
  • ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯಬೇಕು.
  • ಮಾಂಸ, ಮೊಟ್ಟೆ ಇತ್ಯಾದಿಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಅಸುರಕ್ಷಿತವಲ್ಲದ ಕಾಡುಪ್ರಾಣಿ ಮತ್ತು ಸಾಕು ಪ್ರಾಣಿಗಳನ್ನು ಮುಟ್ಟಬಾರದು.

ಈ ಸೋಂಕಿಗೆ ಇಲ್ಲಿಯವರೆಗೆ ಯಾವುದೇ ಔಷಧಿ ಅಥವಾ ಚುಚ್ಚುಮದ್ದು ಕಂಡು ಹಿಡಿದಿಲ್ಲ. ರೋಗಿಯ ಗುಣ ಲಕ್ಷಣಗಳ ಆಧಾರದ ಮೇಲೆ ಆತನಿಗೆ ಚಿಕಿತ್ಸೆ ನೀಡಲಾಗುತ್ತದೆ. ಹೀಗಾಗಿ ಸಾರ್ವಜನಿಕರು ಸಾಕಷ್ಟು ಎಚ್ಚರಿಕೆ ವಹಿಸುವುದು ಸೂಕ್ತ.

ರಾಜ್ಯದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರಿರಾಮುಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ABOUT THE AUTHOR

...view details