ಕರ್ನಾಟಕ

karnataka

ETV Bharat / state

ಕಸ್ಟಮ್ಸ್ ಅಧಿಕಾರಿಗಳೆಂದು ಹಣ ಪಡೆದು ವಂಚಿಸುತ್ತಿದ್ದ ದಂಪತಿಯ ಬಂಧನ​

ಉದ್ಯೋಗ ಮತ್ತು ಕಡಿಮೆ ಬೆಲೆಗೆ ಸೀಜ್​ ಆಗಿರುವ ಆಭರಣಗಳನ್ನು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚನೆ ಮಾಡಿದ್ದ ಖತರ್ನಾಕ್​​ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

couple arrest
ದಂಪತಿ ಅರೆಸ್ಟ್​

By

Published : Nov 24, 2022, 10:49 AM IST

ದೇವನಹಳ್ಳಿ: ಸೀಮಾ ಸುಂಕ (ಕಸ್ಟಮ್ಸ್) ಅಧಿಕಾರಿಗಳೆಂದು ಹೇಳಿಕೊಂಡು ಬೆಂಗಳೂರು ಏರ್​ಪೋರ್ಟ್​ನಲ್ಲಿ ಕೆಲಸ ಮತ್ತು ಜಪ್ತಿ ಆದ ಚಿನ್ನಾಭರಣವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಧನುಷ್ಯ ಅಲಿಯಾಸ್ ರಾಚೇಲ್ ಹಾಗೂ ಆಕೆಯ ಪತಿ ದಾರ್ಬಿನ್ ದಾಸ್ ಅಲಿಯಾಸ್ ಮೋಹನ್ ದಾಸ್ ಬಂಧಿತರು. ಇವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಾಗಿ ಕೆಲಸ ಮಾಡುತ್ತಿರುವುದಾಗಿ ಸಾರ್ವಜನಿಕರಿಗೆ ನಂಬಿಸಿ, ಏರ್​ಪೋರ್ಟ್​ನಲ್ಲಿ ಕೆಲಸ ಮತ್ತು ಸೀಜ್ ಆದ ಚಿನ್ನಾಭರಣಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ಆನಂತರ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದರು.

ಈ ಕುರಿತು ದೇವನಹಳ್ಳಿ ಮತ್ತು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈಶಾನ್ಯ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 34 ಲಕ್ಷ ರೂ. ನಗದು, 106.965 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ABOUT THE AUTHOR

...view details