ಆನೇಕಲ್:ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು - anekal cow death news
ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ರಾಯಲ್ ಕೌಂಟಿ ಪಾರ್ಕ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿದ್ದು,ಇದಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು
ಈ ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಹಸು ಕೆಂಬತ್ತಳ್ಳಿ ನಿವಾಸಿ ಬಾಬು ಎಂಬುವರಿಗೆ ಸೇರಿದ್ದಾಗಿದೆ. ಹಸು ಕಳೆದುಕೊಂಡ ಮಾಲೀಕ ಬೆಸ್ಕಾಂ ಅಧಿಕಾರಿಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಈ ಪಾರ್ಕಿನಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆ ವಾಕಿಂಗ್ ಮಾಡಲು ಹಲವಾರು ಜನರು ಬರ್ತಾರೆ. ಹೀಗಾಗಿ ಇದನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.