ಕರ್ನಾಟಕ

karnataka

ETV Bharat / state

ದಲಿತ ಯುವಕ ಅನಿಲ್ ಇಂಗಳಗಿ ಹತ್ಯೆ ಖಂಡಿಸಿ ಪ್ರತಿಭಟನೆ - Doddaballapur protest news

ದಲಿತ ಯುವಕ ಅನಿಲ್ ಇಂಗಳಗಿ ಹತ್ಯೆ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

Doddaballapur
ದಲಿತ ಯುವಕ ಅನಿಲ್ ಇಂಗಳಗಿ ಹತ್ಯೆ ಖಂಡಿಸಿ ಪ್ರತಿಭಟನೆ

By

Published : Sep 1, 2020, 9:16 AM IST

Updated : Sep 1, 2020, 9:44 AM IST

ದೊಡ್ಡಬಳ್ಳಾಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ದಲಿತ ಯುವಕ ಅನಿಲ್ ಇಂಗಳಗಿ ಹತ್ಯೆ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ದಲಿತ ಯುವಕ ಅನಿಲ್ ಇಂಗಳಗಿ ಹತ್ಯೆ ಖಂಡಿಸಿ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ದೇವಸ್ಥಾನದಲ್ಲಿ ಸವರ್ಣೀಯರ ಸರಿಸಮಾನವಾಗಿ ಕುಳಿತನೆಂಬ ಕಾರಣಕ್ಕಾಗಿ ಕಣ್ಣಿಗೆ ಕಾರದ ಪುಡಿ ಎರಚಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಇದು ಅಮಾನವೀಯ ಕೃತ್ಯವಾಗಿದ್ದು, ಮಾನವ ಸಮುದಾಯ ತಲೆ ತಗ್ಗಿಸುವಂತೆ ಮಾಡಿದೆ.

ಈ ಘಟನೆಗೆ ಏನೇ ಕಾರಣವಿರಲಿ ಪೊಲೀಸ್ ಇಲಾಖೆ ಯಾವುದೇ ಒತ್ತಡಗಳಿಗೆ ಮಣಿಯದೆ ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಗೆ ಗುರಿಪಡಿಸಬೇಕು. ಕೊಲೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

Last Updated : Sep 1, 2020, 9:44 AM IST

ABOUT THE AUTHOR

...view details