ಕರ್ನಾಟಕ

karnataka

ETV Bharat / state

ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ವಿಕಲಚೇತನರ  ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ - ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆ

ಸಾರಿಗೆ ಬಸ್​ನಿಲ್ದಾಣದ ವಿಕಲಚೇತನರ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

kn_bng
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

By

Published : Dec 13, 2022, 12:19 PM IST

ದೊಡ್ಡಬಳ್ಳಾಪುರ: ನಗರದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದ ವಿಕಲಚೇತನರ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ವಿಕಲಚೇತನರ ಸಹಾಯಕ್ಕಾಗಿ ಹಾಕಿರುವ ಕಬ್ಬಿಣದ ಸಲಾಕೆಗೆ ನೇಣು ಹಾಕಲಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ನೇಣು ಹಾಕಿಕೊಂಡಂತೆ ಬಿಂಬಿಸಿರುವ ಅನುಮಾನ ವ್ಯಕ್ತವಾಗಿದೆ. ಕುಳಿತುಕೊಳ್ಳುವಷ್ಟು ಜಾಗದಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕಾಲು ದೇಹ ಸಂಪೂರ್ಣ ನೆಲದ ಮೇಲೆ‌ ಇರುವ ಕಾರಣ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ:ಓವರ್​ಟೇಕ್​ ಭರದಲ್ಲಿ ಬಿಎಂಟಿಸಿ ಬಸ್​ಗೆ ಸಿಲುಕಿ ಬೈಕ್​ ಸವಾರ ಸಾವು

ABOUT THE AUTHOR

...view details