ದೊಡ್ಡಬಳ್ಳಾಪುರ:ಇಲ್ಲಿನ ಗ್ರಾಮಾಂತರ ಠಾಣೆ ವ್ಯಾಪ್ತಿಯ ಹೊನ್ನಾಘಟ್ಟ ಕೆರೆಯಲ್ಲಿ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿ ನಂತರ ಕೆರೆಯಲ್ಲಿ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು 25ರಿಂದ 30 ವರ್ಷ ವಯಸ್ಸಿನ ಯುವಕನ ಮೃತದೇಹ ಇದಾಗಿದ್ದು, ಬಟ್ಟೆ, ಮುಖ ಚಹರೆ ಆಧಾರದ ಮೇಲೆ ಮೃತನ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ.
ಕೊಲೆ ಶಂಕೆ ಹಿನ್ನೆಲೆ ಆರೋಪಿಗಳ ಪತ್ತೆಗಾಗಿ ಡಿವೈಎಸ್ಪಿ ರಂಗಪ್ಪ ಅವರ ಮಾರ್ಗದರ್ಶನದಂತೆ ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.
ಮೃತನ ಸಂಬಂಧಿಕರು ಯಾರಾದರೂ ಇದ್ದಲ್ಲಿ ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ಪೆಕ್ಟರ್ ಅವರನ್ನು ಸಂಪರ್ಕಿಸಲು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 9480802437, 9480802453 ನಂಬರ್ಗೆ ಕರೆ ಮಾಡಿ ತಿಳಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ.