ಬೆಂಗಳೂರು:ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದಂತೆ ಕರಾವಳಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮೋಡ ಕವಿದ ವಾತಾವರಣವಿದ್ದು, ಬಿರುಗಾಳಿ ಬೀಸುತ್ತಿದೆ.
ಬೆಂಗಳೂರಿನಲ್ಲಿ ದಟ್ಟ ಮೋಡ ಕವಿದ ವಾತಾವರಣ: ಕರಾವಳಿಯಲ್ಲಿ ಭಾರೀ ಮಳೆ - ಮೋಡ ಕವಿದ ವಾತಾವರಣ ಬಿರುಗಾಳಿ
ಕರಾವಳಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮೋಡ ಕವಿದ ವಾತಾವರಣವಿದ್ದು, ಬಿರುಗಾಳಿ ಬೀಸುತ್ತಿದೆ.
ಭಾರೀ ಮಳೆ
ಇಂದು ಮುಂಜಾನೆವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಸಂಜೆ, ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನದಲ್ಲಿ ಹಗುರದಿಂದ ಸಾಧಾರಣವಾಗಿ ಕೆಲವೆಡೆ ಭಾರಿ ಮಳೆಯಾಗಬಹುದು. ಹೀಗಾಗಿ ಮುಂದಿನ ನಾಲ್ಕು ದಿನಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞರಾದ ಸಿಎಸ್ ಪಾಟೀಲ್ ತಿಳಿಸಿದ್ದಾರೆ.