ಕರ್ನಾಟಕ

karnataka

ಯುಪಿಎ ಸರ್ಕಾರ ಬಂದರೆ ಅಡುಗೆ ಅನಿಲ ಬೆಲೆ ಇಳಿಕೆ: ವೀರಪ್ಪ ಮೊಯ್ಲಿ ಆಶ್ವಾಸನೆ

By

Published : Apr 12, 2019, 6:10 PM IST

ಲೋಕಸಭಾ ಕ್ಷೇತ್ರದ ಜನರಿಗೆ ಎತ್ತಿನಹೊಳೆ ನೀರು ಹರಿಸುವುದಕ್ಕೆ ಹಲವರು ವಿರೋಧಿಸಿದರು. ಅದಕ್ಕೆ ನಾನು ಹೆದರುವುದಿಲ್ಲ. ಈ ಭಾಗಕ್ಕೆ ನೀರು ಹರಿಸದೆ ಸಾಯುವವನಲ್ಲ.

ವೀರಪ್ಪ ಮೊಯಿಲಿ

ದೊಡ್ಡಬಳ್ಳಾಪುರ : ಯುಪಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಸಿಲಿಂಡರ್ ಬೆಲೆ 300ರಿಂದ 350ಕ್ಕೆ ಇಳಿಸಲಾಗುವುದು ಎಂದು ಮೈತ್ರಿ ಅಭ್ಯರ್ಥಿ ಡಾ. ಎಂ.ವೀರಪ್ಪ ಮೊಯ್ಲಿ ಭರವಸೆ ನೀಡಿದರು.

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು, ಕೊನಘಟ್ಟ ಹಾಗೂ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಲೋಕಸಭಾ ಚುನಾವಣಾ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಯುಪಿಎ ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಅಧಿಕವಾಗಿದ್ದರು ಬಡವರಿಗೆ ಹೊರೆಯಾಗದಂತೆ ನೋಡಿಕೊಳ್ಳಲು ಗ್ಯಾಸ್ ಬೆಲೆ 350 ರೂ.ಗಿಂತ ಹೆಚ್ಚಾಗದಂತೆ ನೋಡಿಕೊಳ್ಳಲು ತೈಲ ಕಂಪನಿಗಳಿಗೆ ಮೂರು ಲಕ್ಷ ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ನೀಡುತ್ತಿದ್ದೆವು ಎಂದು ಹೇಳಿದರು.

ವೀರಪ್ಪ ಮೊಯ್ಲಿ

ಲೋಕಸಭಾ ಕ್ಷೇತ್ರದ ಜನರಿಗೆ ಎತ್ತಿನಹೊಳೆ ನೀರು ಹರಿಸುವುದಕ್ಕೆ ಹಲವರು ವಿರೋಧಿಸಿದರು. ಅದಕ್ಕೆ ನಾನು ಹೆದರುವುದಿಲ್ಲ. ಈ ಭಾಗಕ್ಕೆ ನೀರು ಹರಿಸದೆ ಸಾಯುವವನಲ್ಲ. ಎತ್ತಿನಹೊಳೆ ಕಾಮಗಾರಿ ಐದು ವರ್ಷದಿಂದ ಭರದಿಂದ ಸಾಗುತ್ತಿದೆ. ಅದಕ್ಕೆ ಅಡ್ಡಿಪಡಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಇನ್ನು ಬಿಜೆಪಿ ಅಭ್ಯರ್ಥಿ ಬಚ್ಚೇಗೌಡರಿಗೆ ನೀವು ಮತ ನೀಡಿದರೆ ಸಿಎಂ ಕುಮಾರಸ್ವಾಮಿ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ಮತ ನೀಡಿದಂತೆ ಆಗುತ್ತದೆ. ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಅದು ಈಡೇರಲು ಅವಕಾಶ ನೀಡಬಾರದು ಎಂದರೆ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details