ದೇವನಹಳ್ಳಿ (ಬೆಂಗಳೂರು ಗ್ರಾ):ಡಾಬಾದಲ್ಲಿ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಕ್ರಿಕೆಟ್ ಪಂದ್ಯದ ಸೋಲು ಗೆಲುವಿನ ಮೇಲೆ ಕ್ರಿಕೆಟ್ ಬೆಟ್ಟಿಂಗ್ ಆಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ 36,750 ರೂ. ನಗದು ಜಪ್ತಿ ಮಾಡಿದ್ದಾರೆ.
ನವೆಂಬರ್ 25 ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಕ್ರಿಕೆಟ್ ಪಂದ್ಯವಿತ್ತು. ದೇವನಹಳ್ಳಿ ಪಟ್ಟಣದ ದೊಡ್ಡಬಳ್ಳಾಪುರ ಜಂಕ್ಷನ್ ಬಳಿಯ ಗ್ರೀನ್ ಪಾರ್ಕ್ ಡಾಬಾದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಬಳಿಕ ಡಾಬಾ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಏಳು ಮಂದಿ ಸಿಕ್ಕಿಬಿದ್ದಿದ್ದು, ಮೂವರು ಪರಾರಿಯಾಗಿದ್ದಾರೆ.