ಹೊಸಕೋಟೆ(ಬೆಂಗಳೂರು ಗ್ರಾಮಾಂತರ): ಮತ್ತೆ ತಾಲೂಕಿನ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ದ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ನಾಯಕರನ್ನು ಬಿಟ್ಟು ಶಾಸಕ ಶರತ್ ಅನುಗೊಂಡನಹಳ್ಳಿ ಹೋಬಳಿಯಲ್ಲಿರುವ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿರುವುದು ಈ ಗಲಾಟೆಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ.
ಅದರ ಜೊತೆಗೆ ಹೊಸಕೋಟೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮೂಲ ಕಾಂಗ್ರೆಸ್ಸಿಗರ ಸಭೆಯಲ್ಲಿ ಈ ಬಾರಿ ಶರತ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು. ಬದಲಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಸಾದ್ ಅಥವಾ ಮುನಿ ಶಾಮಣ್ಣ ಅವರಿಗೆ ಟಿಕೆಟ್ ನೀಡುವಂತೆ ಮುಖಂಡರು ಒತ್ತಾಯ ಮಾಡಿದ್ದಾರೆ.
ಸಭೆಯಲ್ಲಿ ಪರಸ್ಪರ ಮೂಲ ಕಾಂಗ್ರೆಸ್ಸಿಗರು ಕಿತ್ತಾಡಿಕೊಂಡಿದ್ದು, ಗದ್ದಲ ಹೆಚ್ಚಾಗಿದೆ. ಇದರ ಜೊತೆಗೆ ಶಾಸಕ ಶರತ್ ಮೂಲ ಕಾಂಗ್ರೆಸ್ ನಾಯಕರನ್ನು ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿರುವ ಆರೋಪವೂ ಕೇಳಿ ಬಂದಿದೆ.