ನೆಲಮಂಗಲ : ಬೆಂಗಳೂರು ಗ್ರಾಮಾಂತರ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ಣ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನೆಲಮಂಗಲ ಪಟ್ಟಣದ ಪವಾಡ ಶ್ರೀ ಬಸವಣ್ಣ ಮಠದ ಬಸವ ಮಂಟಪದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆಯನ್ನ ಆಯೋಜಿಸಿದ್ದು, ಬಸವಣ್ಣ ದೇವರ ಮಠದ ಶ್ರೀಸಿದ್ಧಲಿಂಗ ಮಹಾಸ್ವಾಮಿಗಳು ಚಾಲನೆ ನೀಡಿದ್ರು.
ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆ.. ಶ್ರೀ ಸಿದ್ಧಲಿಂಗ ಸ್ವಾಮೀಜಿಗಳಿಂದ ಚಾಲನೆ.. - ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆ
ಬೆಂಗಳೂರು ಗ್ರಾಮಾಂತರ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನೆಲಮಂಗಲ ಪಟ್ಟಣದ ಪವಾಡ ಶ್ರೀ ಬಸವಣ್ಣ ಮಠದ ಬಸವ ಮಂಟಪದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.
ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆ: ಶ್ರೀಸಿದ್ಧಲಿಂಗ ಮಹಾಸ್ವಾಮಿಗಳಿಂದ ಚಾಲನೆ
ವ್ಯವಹಾರಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಶ್ಯಾಮಲಾ ಮತ್ತು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ನಾಗವೇಣಿಯವರು ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ್ದರು. ಸಂಸತ್ ಕಲಾಪಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಒಂದು ಅಣಕು ಸಂಸತ್ ಸ್ಪರ್ಧೆಯನ್ನ ಆಯೋಜಿಸಲಾಗಿದ್ದು, ತಾಲೂಕಿನ ಹಲವು ಕಾಲೇಜಿನಿಂದ ಹತ್ತಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಣಕು ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿದ್ರು.