ದೊಡ್ಡಬಳ್ಳಾಪುರ: ಕೊರೊನಾ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿದ ಸರ್ಕಾರ, ಕೊರೊನಾ ಹೆಚ್ಚಾದಾಗ ತೆಗೆದಿದೆ. ಸರ್ಕಾರದ ಬೊಕ್ಕಸಕ್ಕೆ ಹಣ ಬೇಕೇ ಹೊರತು ಜನರ ಆರೋಗ್ಯ ಮುಖ್ಯವಲ್ಲವೆಂದು ಸಂಸದ ಡಿ.ಕೆ ಸುರೇಶ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಸದ ಡಿ.ಕೆ ಸುರೇಶ್ ಸರ್ಕಾರ ವಿರುದ್ಧ ವಾಗ್ದಾಳಿ ನಗರದ ಬಾಬು ಜಗಜೀವನ್ ರಾವ್ ಭವನದಲ್ಲಿ ಬಮೂಲ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ ಅವರು ಮಾತನಾಡಿದರು. ಕೊರೊನಾ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಎಲ್ಲವನ್ನು ತೆರೆದು ಬೊಕ್ಕಸಕ್ಕೆ ಹಣ ತರಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಾಗಿಲ್ಲ. ಬರುವ ದಿನಗಳಲ್ಲಿ ಸರ್ಕಾರದ ವೈಫಲ್ಯ ಎಲ್ಲರಿಗೂ ತಿಳಿಯಲಿದೆ ಎಂದರು.
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹಾಗೂ ಪ್ರಮಾಣ ಪತ್ರ ವಿತರಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೆಲವು ಕಠಿಣ ನಿರ್ಧಾರ ತೆಗೆದುಕೊಳ್ಳದೆ, ಎಲ್ಲಾ ರಾಜ್ಯದ ವಲಸೆ ಕಾರ್ಮಿಕರನ್ನು ಸರಿಯಾಗಿ ಆರೋಗ್ಯ ತಪಾಸಣೆ ಮಾಡದಿರುವ ಕಾರಣ ಕರೊನಾ ಪ್ರಕರಣ ಹೆಚ್ಚಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೆಲಸಕ್ಕೆ ಬಿಜೆಪಿ ಕೈಹಾಕಿದ್ದು, ಪಂಚಾಯಿತಿ ಮಟ್ಟದಲ್ಲಿ ಉತ್ತಮ ಕೆಲಸ ಮಾಡಲು ಸದಸ್ಯರನ್ನು ಮುಂದುವರಿಸಬೇಕಾಗಿದೆ. ಕೊರೊನಾ ತಡೆಗೆ ಎಲ್ಲರೂ ಸರ್ಕಾರದ ಜತೆ ಸ್ಪಂದಿಸುತ್ತಿದ್ದರೂ ರಾಜ್ಯ ಸರ್ಕಾರ ಎಲ್ಲಾ ಬಿಜೆಪಿಮಯ ಮಾಡಲು ಹೊರಟಿರುವುದು ಸರಿಯಲ್ಲ ಎಂದರು.
ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಬಗ್ಗೆ ಮಾತನಾಡಿದ ಸಂಸದರು, ಕೆಲವು ಕಿಡಿಗೇಡಿಗಳು ರಾಜಕೀಯ ದುರುದ್ದೇಶದಿಂದ ಮಾಡಿರುವ ಕೆಲಸ ಇದು. ವಿರೋಧ ಪಕ್ಷವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡುವುದು, ತೀಕ್ಷ್ಣ ಮಾತುಗಳನ್ನಾಡುವುದು ಸಾಮಾನ್ಯ. ಅದನ್ನ ಹತ್ತಿಕ್ಕುವ ಕೆಲಸ ಭಾರತೀಯ ಜನತಾ ಪಕ್ಷ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವಂಥ ವಿಚಾರವಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. ಸರ್ಕಾರ ಸ್ಪಂದಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.