ಆನೇಕಲ್: ಮಾಜಿ ಸಚಿವ ಡಿ.ಕೆ ಶಿವಕುಮಾರ್ನ್ನು ಶೀಘ್ರವೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ - Former mInister DK Shivakumar arrest
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ
ಜಿಗಣಿಯ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ, ಇಡಿ, ಐಟಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಎಒಇಎಸ್ ವೃತ್ತದಲ್ಲಿ ಜಮಾವಣೆಗೊಂಡು, ಮಾನವ ಸರಪಳಿ ನಿರ್ಮಿಸಿ ಕೈಯಲ್ಲಿ ಜ್ಯೋತಿ ಹಿಡಿದು ಡಿಕೆಶಿ ಪರ ಘೋಷಣೆ ಕೂಗಿದರು.