ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ 'ವೈದ್ಯರ ನಡೆ ಹಳ್ಳಿಯ ಕಡೆ' ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾರಿಗೊಳಿಸಲಾಯಿತು. ಇದರಿಂದ ಕೊರೊನಾ ವೈರಸ್ ಹರಡುವಿಕೆಗೆ ಕಡಿಮೆಯಾಗಿದ್ದು, ಕಾರ್ಯಕ್ರಮ ಯಶಸ್ಸಿಯಾಗಿದ್ದಕ್ಕೆ ಈಗ ರಾಜ್ಯಾದ್ಯಂತ ಜಾರಿ ಮಾಡಲಾಗಿದೆ.
ಮೇ 17ರಂದು ದೇವನಹಳ್ಳಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೈದ್ಯರು, ನರ್ಸ್ಗಳು ಮತ್ತು ಅಂತಿಮ ವರ್ಷದ ವೈದಕೀಯ ವಿದ್ಯಾರ್ಥಿಗಳು ಕೊರೊನಾ ವಾರಿಯರ್ಸ್ ಆಗಿ ಜಿಲ್ಲೆಯ ಪ್ರತಿ ಹಳ್ಳಿಗಳಿಗೂ ಭೇಟಿ ನೀಡುವರು. ಬಳಿಕ ಆ ಹಳ್ಳಿಗಳಲ್ಲಿ ಮೊಬೈಲ್ ಕ್ಲಿನಿಕ್ ತೆರೆದು ಮುಖ್ಯವಾಗಿ ಸೋಂಕಿನ ಲಕ್ಷಣಗಳಿರುವವರಿಗೆ ಪರೀಕ್ಷೆ ನಡೆಸಿ, ಕೊರೊನಾ ಸೊಂಕು ದೃಢಪಟ್ಟರೆ ಸಮೀಪದ ಕೋವಿಡ್ ಕೇರ್ ಸೆಂಟರ್ಗೆ ಕಳಿಸುವುದು. ಇಲ್ಲವೇ ಮನೆಯಲ್ಲಿಯೇ ಸೂಕ್ತ ವ್ಯವಸ್ಥೆಯಿದ್ದರೆ ಅಲ್ಲಿಯೇ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಳ್ಳುವುದು. ಸೋಂಕಿತರಿಗೆ ಮೆಡಿಕಲ್ ಕಿಟ್ ನೀಡುವುದನ್ನು ಮಾಡುತ್ತಿದ್ದಾರೆ.