ಕರ್ನಾಟಕ

karnataka

By

Published : Sep 10, 2022, 9:39 AM IST

ETV Bharat / state

ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ : ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಮಾಡುವಂತೆ ಒತ್ತಾಯ

ದೊಡ್ಡಬಳ್ಳಾಪುರವನ್ನು ಬೆಂಗಳೂರು ಗ್ರಾಮಾಂತರದ ಜಿಲ್ಲಾ ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲು ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನಿರ್ಧರಿಸಿದ್ದು, ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಹೋರಾಟ ಮಾಡುಗತ್ತಿದ್ದಾರೆ.

doddaballapura-bjp-janaspandana-program-black-flag-display-protest
ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಾಗರಿಕರು ಹೋರಾಟ ಮಾಡುತ್ತಿದ್ದಾರೆ.

ದೊಡ್ಡಬಳ್ಳಾಪುರ ನಗರದ ಎಪಿಎಂಪಿ ವರ್ತಕರು ಇಂದು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಜನಸ್ಪಂದನ ಕಾರ್ಯಕ್ರಮಕ್ಕೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರ ನಗರವನ್ನು ಘೋಷಣೆ ಮಾಡಬೇಕೆಂಬುದು ಹೋರಾಟಗಾರರ ಒತ್ತಾಯವಾಗಿದೆ. ಇಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಎಚ್ಚರಿಕೆ ನೀಡಿದ ಹೋರಾಟಗಾರರು ಇಂದು ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಕಪ್ಪು ಬಾವುಟ ಮತ್ತು ಕಪ್ಪು ಬಟ್ಪೆಯನ್ನು ಪ್ರದರ್ಶನ ಮಾಡುವ ಮೂಲಕ ಎಚ್ಚರಿಕೆ ರವಾನಿಸಿದರು.

ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ

ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಇಂದು ಕರಾಳೋತ್ಸವಕ್ಕೆ ಕರೆ ನೀಡಿದೆ. ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಇಂದು ಬೆಳಗ್ಗೆ 9:30ಕ್ಕೆ ನಗರದ ಕನ್ನಡ ಜಾಗೃತ ಭವನದಿಂದ ಬೃಹತ್ ಜಾಥ ಹೊರಡಲಿದೆ. ಜಗದೀಶ್ ವೃತ್ತದಲ್ಲಿ ಪ್ರತಿಭಟನೆ ಮಾಡುವ ಮೂಲಕ ಕರಾಳೋತ್ಸವ ಆಚರಣೆ ಮಾಡಲಿದೆ. ಆದರೆ ಪೊಲೀಸ್ ಇಲಾಖೆ ಜಗದೀಶ್​ ವೃತ್ತದಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡಿಲ್ಲ. ಆದರೆ ಪ್ರತಿಭಟನೆಕಾರರು ತಮ್ಮ ಪಟ್ಟು ಸಡಿಲಿಸಿಲ್ಲ.

ಇದನ್ನೂ ಓದಿ :ಜನಸ್ಪಂದನ ಕಾರ್ಯಕ್ರಮದಲ್ಲಿ ಜೆ.ಪಿ.ನಡ್ಡಾ ಬದಲಿಗೆ ಸ್ಮೃತಿ ಇರಾನಿ ಭಾಗಿ!

ABOUT THE AUTHOR

...view details