ದೊಡ್ಡಬಳ್ಳಾಪುರ:ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಶ್ರಮಿಸುತ್ತಿದ್ದರೂ ಕೆಲ ಖಾಸಗಿ ಆಸ್ಪತ್ರೆಗಳು ಹಣ ಮಾಡುವ ದಂಧೆಗೆ ಇಳಿದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ, ದೊಡ್ಡಬಳ್ಳಾಪುರದ ಕೋವಿಡ್ ಆಸ್ಪತ್ರೆ ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ.
ದೊಡ್ಡಬಳ್ಳಾಪುರ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ: ಮೆಚ್ಚುಗೆ ವ್ಯಕ್ತಪಡಿಸಿದ ನಗರಸಭೆ ಸಿಬ್ಬಂದಿ - Doddaballapura
ದೊಡ್ಡಬಳ್ಳಾಪುರದ ಕೋವಿಡ್ ಆಸ್ಪತ್ರೆ ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುತ್ತಿದೆ ಎಂದು ನಗರಸಭೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ
ದೊಡ್ಡಬಳ್ಳಾಪುರ ನಗರಸಭೆ ಸಿಬ್ಬಂದಿಯೊಬ್ಬರು ಕೊರೊನಾ ವಾರಿಯರ್ ಆಗಿ ದುಡಿಯುತ್ತಿದ್ದರು. ಈ ಸಮಯದಲ್ಲಿ ಅವರಿಗೆ ಸೋಂಕು ತಗುಲಿದ್ದು, ಅವರನ್ನು ಇಲ್ಲಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಆರೈಕೆ ಕಂಡು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ
ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆಹಾರದ ವ್ಯವಸ್ಥೆ ಜೊತೆಗೆ ಪ್ರತಿಯೊಬ್ಬರಿಗೂ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಉತ್ತಮ ಚಿಕಿತ್ಸೆ ಕೂಡ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.