ದೊಡ್ಡಬಳ್ಳಾಪುರ:ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ತಾವು ನೀಡುವ ಚಿಕಿತ್ಸೆಗೆ ರೋಗಿಗಳಿಂದ ಹಣ ಪಡೆಯುತ್ತಿರುವಪ್ರಕರಣವೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಂದ ಹಣ ಪೀಕಿದ ವೈದ್ಯ: ಮೊಬೈಲ್ನಲ್ಲಿ ದೃಶ್ಯ ಸೆರೆ - ಚೀಫ್ ಮೆಡಿಕಲ್ ಆಫಿಸರ್
ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ತಾವು ನೀಡುವ ಚಿಕಿತ್ಸೆಗೆ ರೋಗಿಗಳಿಂದ ಹಣ ಪಡೆಯುತ್ತಿರುವ ಪ್ರಕರಣವೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.
ಸರ್ಕಾರ ಬಡರೋಗಿಗಳ ಆರೋಗ್ಯ ರಕ್ಷಣೆಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ವಾರ್ಷಿಕ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತಿದ್ದರೂ ದೌರ್ಭಾಗ್ಯವೆಂಬಂತೆ ಬಡ ರೋಗಿಗಳಿಗೆ ಮಾತ್ರ ಯೋಜನೆಗಳು ಕೈಗೆಟಕುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಈ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ ವೈದ್ಯ ಪಾರ್ಥಸಾರಥಿ ಎಂಬುವವರು ಆಸ್ಪತ್ರೆಗೆ ಬರುವ ಬಡ ರೋಗಿ ಗಳಿಂದ ಚಿಕಿತ್ಸೆ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಹಣ ತೆಗೆದುಕೊಳ್ಳುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ವಿಚಾರವಾಗಿ ಚೀಫ್ ಮೆಡಿಕಲ್ ಆಫಿಸರ್ ಟಿ.ಆರ್ ರಮೇಶ್ರನ್ನು ಕೇಳಿದ್ರೆ ಅವರು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿ ಕೆಲವೇ ತಿಂಗಳಾಗಿದೆ. ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನಲೆಯಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು ಈಗಾಗಲೇ ಕಾರಣ ಕೇಳಿ ಎಚ್ಚರಿಕೆ ನೋಟಿಸ್ ಜಾರಿ ಮಾಡಲಾಗಿದೆ, ಆರೋಪ ಸಾಬೀತಾದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.