ದೊಡ್ಡಬಳ್ಳಾಪುರ:ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ನೂರೆಂಟು ವಿಘ್ನ ಅನ್ನುವಂತಾಗಿದೆ. ಈಗಾಗಲೇ ಎರಡ್ಮೂರು ಬಾರಿ ಉದ್ಘಾಟನಾ ದಿನ ನಿಗದಿ ಮಾಡಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗಿತ್ತು. ಆದರೆ ಕೋವಿಡ್, ಚುನಾವಣಾ ನೀತಿ ಸಂಹಿತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬದಲಾವಣೆಯಿಂದ ಮತ್ತೆ ಮತ್ತೆ ಉದ್ಘಾಟನಾ ಕಾರ್ಯಕ್ರಮ ಮೂಂದೂಡಲಾಗುತ್ತಿದೆ.
ಸುಮಾರು 4 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ನಗರಸಭೆಯ ನೂತನ ಭವ್ಯ ಕಟ್ಟಡ ತಲೆ ಎತ್ತಿದೆ. ಕಾಮಾಗಾರಿ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಸಿದ್ದವಾಗಿದೆ, ಕಟ್ಟಡ ಕಾಮಾಗಾರಿ ಪೂರ್ಣಗೊಂಡು ವರ್ಷಗಳೇ ಕಳೆದಿದ್ದು, ಆದರೆ ನಗರಸಭೆಯಲ್ಲಿ ಚುನಾಯಿತ ಸದಸ್ಯರು ಇಲ್ಲದ ಕಾರಣದಿಂದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಂತರ ಉದ್ಘಾಟನೆ ಮಾಡುವ ತೀರ್ಮಾನಕ್ಕೆ ಬರಲಾಗಿತ್ತು.
ಅಕ್ಟೋಬರ್ 26 ರಂದು ನಗರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆಯ್ಕೆಯಾಗಿ ಜನಪ್ರತಿನಿಧಿಗಳ ಕೈಗೆ ಅಧಿಕಾರ ಬಂತು, ನವೆಂಬರ್ 10 ರಂದು ನಗರಸಭೆಯ ನೂತನ ಕಟ್ಟಡ ಉದ್ಘಾಟನೆ ಮಾಡಿ ನೂತನ ಕಟ್ಟಡದಲ್ಲಿ ಮೊಟ್ಟ ಮೊದಲ ಸರ್ವ ಸದಸ್ಯರ ಸಾಮಾನ್ಯ ಸಭೆ ಮಾಡುವ ಆಸೆಯನ್ನ ನೂತನ ಸದಸ್ಯರಿಗೆ ಹೊಂದಿದ್ದರು.