ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಸಚಿವರ ಗೈರು ಹಾಜರಿಯಿಂದಾಗಿ ಪೌರಕಾರ್ಮಿಕರಿಂದ ನೂತನ ನಗರಸಭೆ ಕಾರ್ಯಾಲಯದ ಕಟ್ಟಡ ಉದ್ಘಾಟನೆ ಮಾಡಲಾಗಿತ್ತು. ಆದರೆ ಇದರಿಂದ ತೃಪ್ತರಾಗದ ಮುಖಂಡರು ಮತ್ತೆ ಸಚಿವರಿಂದ ಉದ್ಘಾಟನೆ ಮಾಡಿಸಲು ಸಿದ್ಧತೆ ನಡೆಸಿದ್ದಾರೆ.
ಪೌರಕಾರ್ಮಿಕರಿಂದ ಉದ್ಘಾಟನೆಗೊಂಡ ನಗರಸಭೆ ಕಟ್ಟಡ ಮತ್ತೆ ಉದ್ಘಾಟಿಸಲಿರುವ ಸಚಿವರು ಮತ್ತೆ ಉದ್ಘಾಟನೆ ಮಾಡಿಸುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ ಮತ್ತು ಪೌರಕಾರ್ಮಿಕರಿಗೆ ಮಾಡಿದ ಅವಮಾನ ಎಂದು ಹೇಳಲಾಗುತ್ತಿದೆ.
ದೊಡ್ಡಬಳ್ಳಾಪುರ ನಗರಸಭೆ ಕಾರ್ಯಾಲಯ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಸಿದ್ಧವಾಗಿದ್ದ ಕಟ್ಟಡ, ಮಾರ್ಚ್ 16 ರಂದು ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಅವರಿಂದ ಉದ್ಘಾಟನೆ ಮಾಡಿಸಲು ಸಕಲ ಸಿದ್ಧತೆ ಮಾಡಲಾಗಿತ್ತು. ಆದರೆ ಸಚಿವರ ಕಾರ್ಯಕ್ರಮಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಟಿ. ವೆಂಕಟರಮಣಯ್ಯ ಮತ್ತು ಎಂ.ಎಲ್.ಸಿ ರವಿ ಅವರು ಪೌರಕಾರ್ಮಿಕರಿಂದ ಉದ್ಘಾಟನೆ ಮಾಡಿಸಿದ್ದರು.
ದೊಡ್ಡಬಳ್ಳಾಪುರದ ಸ್ಥಳೀಯ ಜನಪ್ರತಿನಿಧಿಗಳು ಸತತ 5 ನೇ ಬಾರಿ ಉಸ್ತುವಾರಿ ಸಚಿವರಿಂದ ಉದ್ಘಾಟನೆ ಮಾಡಿಸಲು ಸಿದ್ಧತೆ ನಡೆಸಿದ್ದಾರೆ. ನಗರಸಭೆ ಕಟ್ಟಡ ಉದ್ಘಾಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಸರ್ಕಾರಿ ನಿಯಮಗಳ ಪ್ರಕಾರ ಕಟ್ಟಡ ಉದ್ಘಾಟನೆ ಮಾಡಬೇಕಾದರೆ ಮತ್ತೆ ಉದ್ಘಾಟನೆ ಮಾಡುವುದಾಗಿ ಹೇಳಿದ್ದಾರೆ.
ಮತ್ತೆ ಕಟ್ಟಡ ಉದ್ಘಾಟನೆ ಮಾಡುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಉದ್ಘಾಟನಾ ಕಾರ್ಯಕ್ರಮಕ್ಕೆಂದು ಲಕ್ಷಾಂತರ ರೂಪಾಯಿ ಸಾರ್ವಜನಿಕರ ಹಣ ವ್ಯರ್ಥವಾಗಿದೆ. ಮತ್ತೆ ಉದ್ಘಾಟನೆ ಮಾಡುವುದು ಕಟ್ಟಡ ಉದ್ಘಾಟಿಸಿದ ಪೌರಕಾರ್ಮಿಕರಿಗೆ ಮಾಡಿದ ಅವಮಾನವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ವಿಜಯಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಡಿಸಿಯಿಂದ ಹೆರಿಟೇಜ್ ನಡಿಗೆ