ದೇವನಹಳ್ಳಿ(ಬೆಂಗಳೂರು):ದೇವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ, ವಿಶೇಷ ಚೇತನರ ಕ್ರೀಡಾಕೂಟ ಹಾಗೂ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆ ಪ್ರತಿಭಾ ಕಾರಂಜಿ-2022ರ ಉದ್ಘಾಟನೆ ನೆರವೇರಿಸಿ ಸಚಿವ ಡಾ ಕೆ ಸುಧಾಕರ್ ಮಾತನಾಡಿದರು.
ವಿದ್ಯಾರ್ಥಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರಲು ಕ್ರೀಡೆಯು ಅತ್ಯಂತ ಅವಶ್ಯಕವಾಗಿದೆ. ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಕ್ರೀಡಾ ಸೌಕರ್ಯ ಹಾಗೂ ಅವಕಾಶಗಳನ್ನು ಒದಗಿಸಲು ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವ್ಯತ್ಯಯ ಉಂಟಾಗಿತ್ತು.