ನೆಲಮಂಗಲ : ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ( ಬಿಐಇಸಿ) ಯಲ್ಲಿ ನಿರ್ಮಾಣವಾಗುತ್ತಿರುವ ರಾಜ್ಯದ ಅತಿ ದೊಡ್ಡ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾದವಾರದ ಕೋವಿಡ್ ಆಸ್ಪತ್ರೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ - ಸಚಿವ ಸುರೇಶ್ ಕುಮಾರ್ ಭೇಟಿ
ಬೆಂಗಳೂರು ಮಹಾನಗರ ಪಾಲಿಕೆ ಕೋವಿಡ್ ಆರೋಗ್ಯ ಕೇಂದ್ರದ ಉಸ್ತುವಾರಿ ನೋಡಿಕೊಳ್ಳುತ್ತದೆ, ಸುಮಾರು 7000ಕ್ಕೂ ಹೆಚ್ಚು ಬೆಡ್ಗಳ ವ್ಯವಸ್ಥೆ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿನ ಸೋಂಕು ತಗುಲಿದ್ದರೂ ಲಕ್ಷಣ ಇಲ್ಲದ ವ್ಯಕ್ತಿಗಳ 14 ದಿನಗಳ ಕ್ವಾರಂಟೈನ್ ಇಲ್ಲಿ ಮಾಡಲಾಗುತ್ತದೆ.
ಕೋವಿಡ್ ಆಸ್ಪತ್ರೆ
ತುಮಕೂರು ರಸ್ತೆಯ ಮಾದವಾರದ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ( ಬಿಐಇಸಿ) ಯಲ್ಲಿ ರಾಜ್ಯದ ಅತಿ ದೊಡ್ಡ ಕೋವಿಡ್ ಆರೋಗ್ಯ ಕೇಂದ್ರ ನಿರ್ಮಾಣವಾಗುತ್ತಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ಜೊತೆ ಭೇಟಿ ನೀಡಿ ಕೇಂದ್ರದಲ್ಲಿ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದರು. ತಾತ್ಕಾಲಿಕ ಕೋವಿಡ್ ಆರೋಗ್ಯ ಕೇಂದ್ರದ ಕಾಮಗಾರಿ ಬಹಳ ವೇಗವಾಗಿ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.