ದೊಡ್ಡಬಳ್ಳಾಪುರ(ಬೆಂಗಳೂರು): ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಯಾದ ಬೆನ್ನಲ್ಲೇ ಒಂದೊಂದು ಎಡವಟ್ಟುಗಳು ಬೆಳಕಿಗೆ ಬರುತ್ತಲೇ ಇವೆ. ಇಂದು ಕಲಾ ವಿಭಾಗದ ಪ್ರಥಮ ವರ್ಷದ ಎರಡನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಇಂಗ್ಲಿಷ್ನಲ್ಲಿ ಮಾತ್ರ ನೀಡಲಾಗಿದ್ದು, ಉತ್ತರವನ್ನೂ ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಲಾಗಿದೆಯಂತೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಈ ನಿಯಮದಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ಆತಂಕದಲ್ಲಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ನಲ್ಲಿ ಪ್ರಶ್ನೆ ಪತ್ರಿಕೆ : ಬೆಂಗಳೂರು ವಿವಿ ಎಡವಟ್ಟು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎಡವಟ್ಟು : ಬೆಂಗಳೂರು ವಿವಿಯ ಪದವಿ ಪರೀಕ್ಷೆಯಲ್ಲಿ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಕೊಡಲಾಗುತ್ತದೆ. ಆದರೆ ಈ ವರ್ಷ ರಾಷ್ಟ್ರೀಯ ಶಿಕ್ಷಣ ನೀತಿ(NEP) ಜಾರಿಯಾದ ಹಿನ್ನೆಲೆ ವಿಷಯಗಳ ಪ್ರಶ್ನೆ ಪತ್ರಿಕೆಯನ್ನು ಕೇವಲ ಇಂಗ್ಲಿಷ್ ನಲ್ಲಿ ಕೊಟ್ಟಿರುವುಲ್ಲದೆ ಉತ್ತರವನ್ನು ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಿರುವುದು ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.
ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪ್ರಶ್ನೆ ಪತ್ರಿಕೆ: ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ಪ್ರಥಮ ವರ್ಷದ ಕಲಾ ಮಾಧ್ಯಮದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ರಮದಿಂದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ಆತಂಕದಲ್ಲಿದ್ದಾರೆ. ಕಲಾ ವಿಭಾಗದ ಪ್ರಥಮ ವರ್ಷದ ಎರಡನೇ ಸೆಮಿಸ್ಟರ್ ನ ಇವೆಂಟ್ ಮ್ಯಾನೇಜ್ ಮೆಂಟ್ ಪ್ರಶ್ನೆ ಪತ್ರಿಕೆಯನ್ನು ಕೇವಲ ಇಂಗ್ಲಿಷ್ ನಲ್ಲಿ ನೀಡಲಾಗಿದ್ದು, ಅಲ್ಲದೆ ಉತ್ತರವನ್ನು ಇಂಗ್ಲಿಷ್ ನಲ್ಲಿಯೇ ಬರೆಯುವಂತೆ ಸೂಚಿಸಲಾಗಿದೆ. ಮೊದಲ ಸೆಮಿಸ್ಟರ್ ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ನ ಎರಡು ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. ಆದರೀಗ ಯಾವುದೇ ಸೂಚನೆ ನೀಡದೆ ಕೇವಲ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ನೀಡಲಾಗಿದೆ ಎಂದು ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ನಲ್ಲಿ ಪ್ರಶ್ನೆ ಪತ್ರಿಕೆ ಅನುತ್ತೀರ್ಣರಾಗುವ ಆತಂಕದಲ್ಲಿ ವಿದ್ಯಾರ್ಥಿಗಳು : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 230ಕ್ಕೂ ಹೆಚ್ಚು ಪದವಿ ಕಾಲೇಜುಗಳಿದ್ದು, ಶೇ.80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಯಲ್ಲಿ ಉಪನ್ಯಾಸಕರು ಕನ್ನಡದಲ್ಲಿ ಪಾಠ ಮಾಡಿದ್ದಾರೆ. ಕನ್ನಡ ಪಠ್ಯ ಪುಸ್ತಕಗಳನ್ನೇ ವಿದ್ಯಾರ್ಥಿಗಳು ಅಧ್ಯಯನ ಮಾಡಿದ್ದಾರೆ. ಕನ್ನಡದಲ್ಲಿಯೇ ನೋಟ್ಸ್ ಗಳನ್ನು ಮಾಡಿಕೊಂಡಿದ್ದಾರೆ. ಈಗ ಪರೀಕ್ಷೆಯಲ್ಲಿ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ಕೊಟ್ಟಿದಲ್ಲದೆ ಉತ್ತರಗಳನ್ನು ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚನೆ ನೀಡಿರುವುದು ವಿಶ್ವವಿದ್ಯಾಲಯದ ಬೇಜವಾಬ್ದಾರಿ ವರ್ತನೆಗೆ ಸಾಕ್ಷಿಯಾಗಿದೆ.
ಇದನ್ನೂ ಓದಿ :ಜನಪ್ರತಿನಿಧಿಗಳೇ ಬದುಕಿದ್ದೀರಾ?..ಫ್ಲೆಕ್ಸ್ಗೆ ಚಪ್ಪಲಿ ಹಾರ ಹಾಕಿ ಗ್ರಾಮಸ್ಥರ ಆಕ್ರೋಶ