ಕರ್ನಾಟಕ

karnataka

ಸರ್ಕಾರದ ಭೂಸ್ವಾಧೀನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ರೈತ; ಸ್ಥಳೀಯರ ಆಕ್ರೋಶ

By

Published : Apr 21, 2022, 4:55 PM IST

Updated : Apr 21, 2022, 5:26 PM IST

ದೊಡ್ಡಬಳ್ಳಾಪುರ ತಾಲೂಕಿನ ಆದಿನಾರಾಯಣ ಹೊಸಹಳ್ಳಿ, ಕೊಡಿಹಳ್ಳಿ ಕೊನಘಟ್ಟ ಗ್ರಾಮದ ಸುಮಾರು 1034 ಎಕರೆ ಕೃಷಿ ಜಮೀನಲ್ಲಿ ಕೈಗಾರಿಕಾ ವಲಯಕ್ಕಾಗಿ ಭೂಸ್ವಾಧೀನ ಮಾಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಪಿ) ರೈತ ಹನುಮಂತಗೌಡರವರಿಗೆ ಭೂಸ್ವಾಧೀನ ವಿಚಾರಕ್ಕೆ ನೋಟಿಸ್ ನೀಡಿತ್ತು.

ದೊಡ್ಡಬಳ್ಳಾಪುರದಲ್ಲಿ ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತ ಆತ್ಮಹತ್ಯೆ
ದೊಡ್ಡಬಳ್ಳಾಪುರದಲ್ಲಿ ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತ ಆತ್ಮಹತ್ಯೆ

ದೊಡ್ಡಬಳ್ಳಾಪುರ: ಬೇಸಾಯ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲದ ಮುಗ್ದ ರೈತ ಪಿತ್ರಾರ್ಜಿತವಾಗಿ ಬಂದಿದ್ದ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು ದುಡಿದು ನಾಲ್ಕು ಹೆಣ್ಣು ಮಕ್ಕಳ ಮದುವೆ ಮಾಡಿದ್ದ. ಆದರೆ, ಅವನ ನೆಮ್ಮದಿ ಜೀವನಕ್ಕೆ ಕೆಐಎಡಿಪಿ ನೀಡಿದ ಭೂಸ್ವಾಧೀನದ ನೋಟಿಸ್ ಬೆಂಕಿ ಇಟ್ಟಿದೆ. ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ದೊಡ್ಡಬಳ್ಳಾಪುರ ತಾಲೂಕಿನ ಆದಿನಾರಾಯಣ ಹೊಸಹಳ್ಳಿ, ಕೊಡಿಹಳ್ಳಿ ಕೊನಘಟ್ಟ ಗ್ರಾಮದ ಸುಮಾರು 1034 ಎಕರೆ ಕೃಷಿ ಜಮೀನಲ್ಲಿ ಕೈಗಾರಿಕಾ ವಲಯಕ್ಕಾಗಿ ಭೂಸ್ವಾಧೀನ ಮಾಡಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಪಿ) ಕೊನಘಟ್ಟದ ಗ್ರಾಮದ ಹನುಮಂತಗೌಡರವರಿಗೆ ಭೂಸ್ವಾಧೀನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿತ್ತು. ನೋಟಿಸ್ ಬಂದ ಒಂದು ವಾರದಿಂದ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದ ಹನುಮಂತಗೌಡ, ತನ್ನ ಎರಡು ಎಕರೆ 20 ಗುಂಟೆ ಜಮೀನು ಉಳಿಸಿಕೊಳ್ಳಲು ಜನಪ್ರತಿನಿಧಿಗಳನ್ನು ಭೇಟಿ ಮಾಡಿ ನೋವು ತೊಡಿಕೊಂಡಿದ್ದ.


ಒಂದು ವೇಳೆ ಜಮೀನು ಕೈತಪ್ಪಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆಯನ್ನೂ ಸಹ ನೀಡಿದ್ದ. ಕೊನೆಗೂ ರೈತ ನೋಟಿಸ್ ಪತ್ರವನ್ನು ತಮ್ಮ ಜಮೀನಿನಲ್ಲಿ ಇಟ್ಟು ಹಗ್ಗಕ್ಕೆ ಕೊರಳೊಡ್ಡಿದ್ದಾನೆ. ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ ಇಲ್ಲದೆ ಇದ್ದರೂ ಸರ್ಕಾರ ಬಲವಂತವಾಗಿ ಭೂಸ್ವಾಧೀನಕ್ಕೆ ಮುಂದಾಗಿದೆ ಎಂದು ಸರ್ಕಾರದ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ: ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಪೊಲೀಸ್ ವಶಕ್ಕೆ

ಈಗಾಗಲೇ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ಸಾವಿರಾರು ಎಕರೆ ಜಮೀನನ್ನು ರೈತರಿಂದ ವಶಪಡಿಸಿಕೊಳ್ಳಲಾಗಿದೆ. ಆದರೆ, ಇಲ್ಲಿಯವರೆಗೂ ಶೇಕಡಾ 50 ರಷ್ಟು ಕಾರ್ಖಾನೆ ಸ್ಥಾಪನೆಯಾಗಿಲ್ಲ. ಈಗ ಹೊಸದಾಗಿ ಕೈಗಾರಿಕಾ ಸ್ಥಾಪನೆಗಾಗಿ ರೈತರ ಜಮೀನು ಹೊಡೆಯಲು ಸ್ವಾಧೀನದ ನಾಟಕವಾಡುತ್ತಿದೆ ಎಂಬುದು ಸ್ಥಳೀಯರ ಆರೋಪ.

Last Updated : Apr 21, 2022, 5:26 PM IST

For All Latest Updates

TAGGED:

ABOUT THE AUTHOR

...view details