ಕರ್ನಾಟಕ

karnataka

ETV Bharat / state

ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ದೇವನಹಳ್ಳಿ ತಾಲೂಕಿನ ರೈತ ಮುಖಂಡರು ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಪ್ರತಿಭಟಿಸಿದರು. ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ..

protest
ಪ್ರತಿಭಟನೆ

By

Published : Sep 25, 2020, 6:59 PM IST

ದೇವನಹಳ್ಳಿ :ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿ ಮಾಡಲು ಹೊರಟಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಯೂ ಸೇರಿ ಹಲವಾರು ಕಾಯ್ದೆಗಳು ದಲಿತ, ರೈತ ಮತ್ತು ಕಾರ್ಮಿಕ ವಿರೋಧಿಯಾಗಿವೆ. ಈ ಕೂಡಲೇ ಅವುಗಳನ್ನೆಲ್ಲ ಹಿಂಪಡೆಯಬೇಕು ಎಂದು ಒತ್ತಾಯಿಸಿ ನಗರದ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ದೊಡ್ಡಬಳ್ಳಾಪುರ ನಗರದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಸೇರಿದ ದಲಿತ, ರೈತ ಕಾರ್ಮಿಕ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ವಾಹನ ಸಂಚಾರಕ್ಕೆ ಅಡಚಣೆಯಾದ್ದರಿಂದ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಲು ಮುಂದಾದರು. ಅದು ಸಾಧ್ಯವಾಗದಿದ್ದಾಗ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ನಗರ ಪೊಲೀಸ್ ಠಾಣೆಯ ಮುಂದೆ ಮಾತನಾಡಿದ ಹೋರಾಟಗಾರರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೊರೊನಾ ಎಂಬ ಮಾರಕ ರೋಗ ತೋರಿಸಿ, ಅಧಿವೇಶನದಲ್ಲಿ ಯಾವುದೇ ಚರ್ಚೆಗೆ ಅವಕಾಶ ನೀಡದೆ ಭೂಸುಧಾರಣಾ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಮತ್ತು ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ದಲಿತ, ರೈತ ಮತ್ತು ಕಾರ್ಮಿಕರಿಗೆ ಮರಣ ಶಾಸನವಾಗಲಿದೆ. ಈ ಕೂಡಲೇ ಈ ಜನ ವಿರೋಧಿಯಾದ ಎಲ್ಲಾ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ದೇವನಹಳ್ಳಿ ತಾಲೂಕಿನ ರೈತ ಮುಖಂಡರು ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಪ್ರತಿಭಟಿಸಿದರು. ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details